ಕ್ರೀಡೆ

ನ್ಯೂಜಿಲೆಂಡ್ ಮಣಿಸಿ ಟಿ-20 ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ

Pinterest LinkedIn Tumblr

ದುಬೈ: ಕುತೂಹಲ ಕೆರಳಿಸಿದ್ದ ಟಿ-20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 8 ವಿಕೆಟ್ ಗಳಿಂದ ಮಣಿಸುವ ಮೂಲಕ ಆಸ್ಟ್ರೇಲಿಯಾ ಟ್ರೋಪಿಯನ್ನು ಮುಡಿಗೇರಿಸಿಕೊಂಡಿದೆ.

ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತು.

ನ್ಯೂಜಿಲೆಂಡ್ ನೀಡಿದ ರನ್ ಗಳ ಗುರಿಯನ್ನು ಬೆನ್ನಟ್ಟಿದ್ದ ಆಸ್ಟ್ರೇಲಿಯಾ ತಂಡ ಡೇವಿಡ್ ವಾರ್ನರ್ ಅವರ 53 ಮತ್ತು ಮಿಚೆಲ್ ಮಾರ್ಷ್ ಅವರ 77 ರನ್ ಗಳ ನೆರವಿನಿಂದ ಇನ್ನೂ ಏಳು ಎಸೆತ ಬಾಕಿ ಇರುವಾಗಲೇ 8 ವಿಕೆಟ್ ಗಳಿಂದ 173 ರನ್ ಗಳಿಸುವ ಮೂಲಕ ಗೆಲುವಿನತ್ತ ಸಾಗಿತು. ಈ ಮೂಲಕ ಚೊಚ್ಚಲ ಬಾರಿಗೆ ಟಿ-20 ವಿಶ್ವಕಪ್ ಟ್ರೋಫಿಯನ್ನು ಆಸ್ಟ್ರೇಲಿಯಾ ತನ್ನದಾಗಿಸಿಕೊಂಡಿತು.

Comments are closed.