ಕ್ರೀಡೆ

ಹಾರ್ದಿಕ್ ಪಾಂಡ್ಯ ಅವರ 5 ಕೋಟಿ ರೂ. ಬೆಲೆ ವಾಚ್ ವಶಪಡಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳು

Pinterest LinkedIn Tumblr

ಮುಂಬೈ: ಭಾರತದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರ 5 ಕೋಟಿ ಮೌಲ್ಯದ ಎರಡು ವಾಚ್‌ಗಳನ್ನು ಕಸ್ಟಮ್ಸ್ ಇಲಾಖೆಯು ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಿದೆ.

ಐಸಿಸಿ ಟಿ20 ವಿಶ್ವಕಪ್ ನಿರಾಶಾದಾಯಕ ಫಲಿತಾಂಶದ ನಂತರ ಭಾರತೀಯ ಆಟಗಾರರು ತವರಿಗೆ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ವೇಳೆ ಹಾರ್ದಿಕ್ ಪಾಂಡ್ಯ ಅವರನ್ನು ಕಸ್ಟಮ್ಸ್ ಇಲಾಖೆ ತಡೆದು 5 ಕೋಟಿ ರೂಪಾಯಿ ಮೌಲ್ಯದ ಎರಡು ವಾಚ್‌ಗಳನ್ನು ವಶಕ್ಕೆ ಪಡೆದಿದೆ.

ಹಾರ್ದಿಕ್ ಪಾಂಡ್ಯ ಬಳಿಕ ದುಬಾರಿ ವಾಚ್ ಗಳ ಇನ್ ವಾಯ್ಸ್ ಇರಲಿಲ್ಲ. ಹೀಗಾಗಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.

Comments are closed.