ಆಸ್ಟ್ರೇಲಿಯಾ: ಆಸ್ಟ್ರೇಲಿಯಾ ಕ್ರಿಕೆಟ್ ಟೀಂನ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ.
ಶೇನ್ ವಾರ್ನ್ ಅವರಿಗೆ 53 ವರ್ಷ ವಯಸ್ಸಾಗಿತ್ತು. ಶೇನ್ ವಾರ್ನ್ ನಿಧನವಾಗಿರುವ ಬಗ್ಗೆ ಆಸ್ಟ್ರೇಲಿಯಾದ ಫಾಕ್ಸ್ ಕ್ರಿಕೆಟ್ ವರದಿ ಮಾಡಿದೆ.
ಹೃದಯಾಘಾತದಿಂದ ಸಾವು ಸಂಭವಿಸಿರುವ ಬಗ್ಗೆ ಶಂಕೆ ಇದ್ದು, ಶೇನ್ ವಾರ್ನ್ ಹಠಾತ್ ನಿಧನಕ್ಕೆ ವಿಶ್ವ ಕ್ರಿಕೆಟ್ ಕಂಬನಿ ಮಿಡಿದಿದೆ.
ಶುಕ್ರವಾರ ಮುಂಜಾನೆ ರೋಡ್ ಮಾರ್ಷ್ ನಿಧನಕ್ಕೆ ಸಂತಾಪ ಸೂಚಿಸಿ ಶೇನ್ ವಾರ್ನ್ ಟ್ವೀಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಅವರ ನಿಧನ ಸುದ್ದಿ ಹೊರ ಬಿದ್ದಿದೆ.
Comments are closed.