ಕ್ರೀಡೆ

ಚೊಚ್ಚಲ ಆವೃತ್ತಿಯಲ್ಲೇ ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿದ ಗುಜರಾತ್ ಟೈಟನ್ಸ್

Pinterest LinkedIn Tumblr

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್​ಗೆ (ಐಪಿಎಲ್) 6 ವರ್ಷಗಳ ನಂತರ ಹೊಸ ಚಾಂಪಿಯನ್ ಸಿಕ್ಕಿದೆ.

ಐಪಿಎಲ್ 2022 ರಲ್ಲಿ ಚೊಚ್ಚಲಾಗಿ ಪಾದಾರ್ಪಣೆ ಮಾಡುತ್ತಿರುವ ಗುಜರಾತ್ ಟೈಟಾನ್ಸ್ ವಿಶ್ವದ ಅತ್ಯಂತ ಪ್ರಸಿದ್ಧ ಲೀಗ್‌ನ ಹೊಸ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಹೊಸ ತಂಡದ ಜುಗಲ್ಬಂದಿ ಮತ್ತು ಹೊಸ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ 2022 ರ ರೋಚಕ ಅಂತ್ಯವನ್ನು ತಂದರು. ಗುಜರಾತ್ ಮೇ 29 ರ ಭಾನುವಾರದಂದು ಅಹಮದಾಬಾದ್‌ನಲ್ಲಿ ನಡೆದ ಫೈನಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಐಪಿಎಲ್ 2022 ಪ್ರಶಸ್ತಿಯನ್ನು ಗೆದ್ದುಕೊಂಡಿತು. ಇದರೊಂದಿಗೆ ಗುಜರಾತ್ ಟೈಟಾನ್ಸ್ ಐಪಿಎಲ್ ಪ್ರಶಸ್ತಿ ಗೆದ್ದ ಏಳನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Comments are closed.