ಕರಾವಳಿ

ಕಬ್ಬಡಿ ಪಂದ್ಯಾಟದಲ್ಲಿ ಕುಂದಾಪುರ ಪದವಿ ಪೂರ್ವ ಕಾಲೇಜಿನ ಹುಡುಗರ-ಹುಡುಗಿಯರ ತಂಡಕ್ಕೆ ಪ್ರಥಮ, ಜಿಲ್ಲಾ ಮಟ್ಟಕ್ಕೆ ಆಯ್ಕೆ

Pinterest LinkedIn Tumblr

ಕುಂದಾಪುರ: ಇಲ್ಲಿನ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ಆಯೋಜಿಸಲಾದ ಕುಂದಾಪುರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟವನ್ನು ಬುಧವಾರ ನಡೆಯಿತು.

ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಸೀತಾರಾಮ್ ನಕ್ಕತ್ತಾಯ, ಮುಖ್ಯ ಅತಿಥಿಯಾಗಿ‌ ಆಗಮಿಸಿದ ಕುಂದಾಪುರ ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಕುಂದಾಪುರದ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಪ್ರಕಾಶ್ಚಂದ್ರ ಶೆಟ್ಟಿ, ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ನಾಗರಾಜ ಶೆಟ್ಟಿ ಅವರು ಪಂದ್ಯಾಟಕ್ಕೆ ಶುಭ ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲ ನವೀನ ಕುಮಾರ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ರಾಮ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಕೃಷ್ಣಮೂರ್ತಿ ಡಿ.ಬಿ ಕಾರ್ಯಕ್ರಮವನ್ನು ನಿರ್ವಹಿಸಿದರು.

ಪ್ರಶಸ್ತಿ:
ಕುಂದಾಪುರ ಆರ್.ಎನ್ ಶೆಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಬ್ಬಡಿ ಪಂದ್ಯಾಟದಲ್ಲಿ ಕುಂದಾಪುರ ಪದವಿ ಪೂರ್ವ ಕಾಲೇಜಿನ ಹುಡುಗರ ಮತ್ತು ಹುಡುಗಿಯರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ವಿತರಣಾ ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ, ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್ ಶೆಟ್ಟಿ, ತಂಡದ ವ್ಯವಸ್ಥಾಪಕ ಉದಯ್ ಕುಮಾರ್ ಶೆಟ್ಟಿ ಕಾಳವರ, ಪೂರ್ಣಿಮಾ ನಾಯಕ್ ಹಾಗೂ ಆರ್ಯನ್ ಶೆಟ್ಟಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ನವೀನ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರಾದ ರಾಮಶೆಟ್ಟಿ ಜಿಲ್ಲಾ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಜೀವನಶೆಟ್ಟಿ, ತಾಲೂಕು ಕ್ರೀಡಾ ನಿರ್ದೇಶಕ ನಾಗರಾಜು ಶೆಟ್ಟಿ ಗಂಗೊಳ್ಳಿ ಮುಂತಾದವರು ಉಪಸ್ಥಿತರಿದ್ದರು.

Comments are closed.