ಕರಾವಳಿ

ಮಾ.9-10 ಉಡುಪಿಯಲ್ಲಿ 2ನೇ ದಕ್ಷಿಣ ಭಾರತ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ಕ್ರೀಡಾಕೂಟ

Pinterest LinkedIn Tumblr

ಕುಂದಾಪುರ: ಉಡುಪಿ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಶನ್ ಉಡುಪಿ ಇವರ ಸಹಯೋಗದಲ್ಲಿ ಮಾ.9 ರಿಂದ ಮಾ.10ರವರೆಗೆ ಉಡುಪಿಯ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 2ನೇ ದಕ್ಷಿಣ ಭಾರತ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್‌ನ್ನು ಹಮ್ಮಿಕೊಂಡಿದ್ದು ಕ್ರೀಡಾಕೂಟದಲ್ಲಿ ದಕ್ಷಿಣ ಭಾರತ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಪಾಂಡಿಚೇರಿ, ಕೇರಳ ಮತ್ತು ಕರ್ನಾಟಕ ಸೇರಿದಂತೆ 30 ರಿಂದ 80 ವರ್ಷದ ವಯೋಮಾನದ 773 ಕ್ರೀಡಾಪಟುಗಳು ಭಾಗವಹಿಸಲು ಹೆಸರು ನೋಂದಾಯಿಸಿದ್ದಾರೆ ಎಂದು ಉಡುಪಿ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಸುರೇಂದ್ರ ಶೆಟ್ಟಿ ಹೇಳಿದ್ದಾರೆ.

ತಾಲೂಕಿನ ಕೋಟೇಶ್ವರ ಸಮೀಪದ ಅಂಕದಕಟ್ಟೆಯ ಸಹನಾ ಕನ್ವೆನ್ಷನ್ ಸೆಂಟರ್ ಸುಮುಖಾ ಮಿನಿ ಹಾಲ್‌ನಲ್ಲಿ ಬುಧವಾರ ನಡೆಸಿದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾಗವಹಿಸುವ ಕ್ರೀಡಾಪಟುಗಳಿಗೆ ಉಪಹಾರ, ಊಟ ಮತ್ತು ವಸತಿಗೆ ಈಗಾಗಲೇ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಮಾ.9ರಂದು ಕ್ರೀಡಾಕೂಟದ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ಇವರು ನೆರವೇರಿಸಲಿದ್ದು ಅತಿಥಿಗಳಾಗಿ ಕನಾಟಕ ರಾಜ್ಯ ಹಿಂದುಳಿದ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಶಾಸಕರುಗಳಾದ ಗುರ್ಮೆ ಸುರೇಶ್ ಶೆಟ್ಟಿ, ಸುನಿಲ್ ಕುಮಾರ್, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ ಶೆಟ್ಟಿ ಗಂಟಿಹೊಳೆ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಉದ್ಯಮಿಗಳಾದ ಪ್ರಸಾದ್ ರಾಜ್ ಕಾಂಚನ್, ಉದಯ ಕುಮಾರ್ ಶೆಟ್ಟಿ ಮುನಿಯಾಲು, ಎಂ. ದಿನೇಶ್ ಹೆಗ್ಡೆ, ಎಂ.ಜೆ.ಎಫ್ ಲಯನ್ ಸಚ್ಚೀಂದ್ರ ಶೆಟ್ಟಿ, ಅಧ್ಯಕ್ಷರು ಲಯನ್ಸ್ ಕ್ಲಬ್, ಕಾರ್ಕಳ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷರು ಮತ್ತು ಸಹನಾ ಸಂಸ್ಥೆ ಕೋಟೇಶ್ವರ ಮಾಲಕರಾದ ಸುರೇಂದ್ರ ಶೆಟ್ಟಿ ಇವರ ಸಹಯೋಗದೊಂದಿಗೆ ಟಿಶರ್ಟ್‌ನ್ನು ವಿತರಿಸಲಾಗುತ್ತಿದ್ದು ಇದೇ ಸಂದರ್ಭ ಜೆರ್ಸಿ ಬಿಡುಗಡೆಗೊಳಿಸಲಾಯಿತು.

ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ಎಚ್. ಉದಯಕುಮಾರ್ ಶೆಟ್ಟಿ, ಕೆ. ಸುರೇಂದ್ರ ಶೆಟ್ಟಿ, ಖಜಾಂಚಿ ಅನ್ವರ್ ಕಡಪಾಡಿ ಇದ್ದರು.

Comments are closed.