ಕರಾವಳಿ

ಬ್ರಹ್ಮಾವರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಮಟ್ಟದ ಒಳಾಂಗಣ ಪಂದ್ಯಾಟಗಳಿಗೆ ಚಾಲನೆ

Pinterest LinkedIn Tumblr

ಉಡುಪಿ: ಸಾರ್ವಜನಿಕರಿಗೆ ಉತ್ತಮ‌ ಸಂದೇಶಗಳನ್ನು ನೀಡಿ, ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಸ್ಪಂದಿಸುವ ಮಾಧ್ಯಮ ಹಾಗೂ ಪತ್ರಕರ್ತರ ಕಾರ್ಯ ಶ್ಲಾಘನೀಯ
ಎಂದು ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಮಹೇಶ ಶೆಟ್ಟಿ ಹೇಳಿದರು.

ಬ್ರಹ್ಮಾವರ ಹೇರಂಜೆಯಲ್ಲಿರುವ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ನ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ಬ್ರಹ್ಮಾವರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಿತಿ ಮತ್ತು ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಸಹಯೋಗದೊಂದಿಗೆ ನಡೆದ ಉಡುಪಿ ಜಿಲ್ಲಾ ಮಟ್ಟದ ಪತ್ರಕರ್ತರ ಒಳಾಂಗಣ ಸ್ಪರ್ಧೆಗಳಿಗೆ ಚಾಲನೆ‌ ನೀಡಿ ಅವರು ಮಾತನಾಡಿದರು.

ಬ್ರಹ್ಮಾವರದ ನ್ಯೂ ಕರ್ನಾಟಕ ಬಿಲ್ಡರ್ಸ್ ನ ಚೇತನ್ ಕುಮಾರ್ ಶೆಟ್ಟಿ ಮಾತನಾಡಿ ಸಮಾಜದ ನೈಜ ಚಿತ್ರಣವನ್ನು ನೀಡುವ ಪತ್ರಕರ್ತರ ಕಾರ್ಯ ಶ್ಲಾಘನೀಯ ಎಂದರು.

ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ರಾಜೇಶ ಶೆಟ್ಟಿ ಬಿರ್ತಿ ಮಾತನಾಡಿ ಸಮಾಜವನ್ನು ತಿದ್ದಿ ಸಮಾಜದ ಸ್ವಾಸ್ಥ್ಯ ವನ್ನು ಕಾಪಾಡುವ ಕೆಲಸ‌ ಮಾಧ್ಯಮಗಳು ಮಾಡುತ್ತಿವೆ. ತಮ್ಮ ಬಿಡುವಿಲ್ಲದ ಸಮಯದಲ್ಲೂ ಪತ್ರಕರ್ತರು ಇಂತಹ ಕ್ರೀಡೆಗಳನ್ನು ಆಯೋಜಿಸಿರುವುದು ಶ್ಲಾಘನೀಯ ಎಂದು ಹೇಳಿದರು.

ಬ್ರಹ್ಮಾವರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ‌ ರಾಜೇಶ ಗಾಣಿಗ ಅಚ್ಲಾಡಿ ಅದ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಂಘದ ಅಧ್ಯಕ್ಷ ರಾಜೇಶ ಶೆಟ್ಟಿ, ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ನ ಎಂ.ಚಂದ್ರಶೇಖರ ಹೆಗ್ಡೆ, ಕುಂದಾಪುರ‌ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ರಾಯಪ್ಪನ‌ಮಠ, ಹೆಬ್ರಿ ತಾಲ್ಲೂಕು ಅಧ್ಯಕ್ಷ‌ ಸುಕುಮಾರ್ ಮುನಿಯಾಲು, ಕಾಪು ಅಧ್ಯಕ್ಷ ಹರೀಶ್ ಹೆಜಮಾಡಿ,
ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಮೊಹಮ್ಮದ್ ಶರೀಫ್, ಬ್ರಹ್ಮಾವರದ ಸಂಘದ ಗೌರವಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಇದ್ದರು.

ಚಂದ್ರಶೇಖರ ಬೀಜಾಡಿ ಸ್ವಾಗತಿಸಿ ವಂದಿಸಿದರು.

 

Comments are closed.