ಅಂತರಾಷ್ಟ್ರೀಯ

ಟಿ-20 ಕ್ರಿಕೆಟ್ ವಿಶ್ವಕಪ್‌: ಸ್ಕಾಟ್ಲೆಂಟ್‌ ತಂಡದ ಜೆರ್ಸಿಯಲ್ಲಿ ಕರ್ನಾಟಕದ ‘ನಂದಿನಿ’ ಬ್ರ್ಯಾಂಡ್‌ ಲೋಗೋ

Pinterest LinkedIn Tumblr

ಬೆಂಗಳೂರು: ಐಸಿಸಿ ಪುರುಷರ ಟಿ–20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಗೆ ಕರ್ನಾಟಕ ಹಾಲು ಮಹಾಮಂಡಳಿಯ (ಕೆಎಂಎಫ್) ‘ನಂದಿನಿ’ ಲಾಂಛನ ಇರುವ ನೂತನ ಜೆರ್ಸಿಯನ್ನು ಸ್ಕಾಟ್ಲೆಂಡ್ ಬಿಡುಗಡೆ ಮಾಡಿದೆ.

ಹೊಸ ಜೆರ್ಸಿಯನ್ನು ತೊಟ್ಟಿರುವ ಆಟಗಾರರ ಚಿತ್ರವನ್ನು ಕ್ರಿಕೆಟ್ ಸ್ಕಾಟ್ಲೆಂಡ್‌ ತನ್ನ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ನೂತನ ಜೆರ್ಸಿಯಲ್ಲಿ ಸ್ಕಾಟ್ಲೆಂಡ್ ಆಟಗಾರರು
ಜೆರ್ಸಿಯ ಬಲ ತೋಳಿನಲ್ಲಿ ನಂದಿನಿ ಲಾಂಛನವನ್ನು ಹಾಕಲಾಗಿದೆ. ನಂದಿನಿ ಎಂದು ಕನ್ನಡ ಹಾಗೂ ಇಂಗ್ಲೀಷ್‌ನಲ್ಲಿ ಬರೆಯಲಾಗಿದೆ.

https://x.com/CricketScotland/status/1790777913769697380

‘ಟಿ–20 ಅಭಿಯಾನದಲ್ಲಿ ಸ್ಕಾಟ್ಲೆಂಡ್‌ ಜೊತೆ ಪಾಲುದಾರಿಕೆ ಹೊಂದಿದ್ದು ನಮಗೆ ಸಂತೋಷವಾಗಿದೆ. ನಂದಿನಿಯು ಒಂದು ಬ್ರಾಂಡ್ ಆಗಿ ಶ್ರೇಷ್ಠತೆ ಮತ್ತು ಶುದ್ಧತೆಯನ್ನು ಪ್ರತಿನಿಧಿಸುತ್ತದೆ. ಕಳೆದ ನಲವತ್ತು ವರ್ಷಗಳಲ್ಲಿ ನಾವು ಜಾಗತಿಕ ಬ್ರಾಂಡ್ ಆಗಿ ಬೆಳೆದಿದ್ದೇವೆ’ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ ಜಗದೀಶ್‌ ಅವರ ಹೇಳಿಕೆಯನ್ನು ಕ್ರಿಕೆಟ್ ಸ್ಕಾಟ್ಲೆಂಡ್‌ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

Comments are closed.