UAE

ದುಬೈನಲ್ಲಿ ‘ನೀನೇ ರಾಜಕುಮಾರ’; ಫೆಬ್ರವರಿ 19ಕ್ಕೆ ಖ್ಯಾತ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್’ರಿಂದ ಸಂಗೀತ ಸಂಜೆ

Pinterest LinkedIn Tumblr

ದುಬೈ: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಸ್ವರ ಮಾಂತ್ರಿಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮರಣಾರ್ಥ ವಿಜಯ್ ಪ್ರಕಾಶ್ ಸಂಗೀತ ಸಂಜೆ ಕಾರ್ಯಕ್ರಮ ‘ನೀನೇ ರಾಜಕುಮಾರ’ ದುಬೈನಲ್ಲಿ 2022 ಫೆಬ್ರವರಿ 19 ರಂದು ಸಂಜೆ 6 ಗಂಟೆಗೆ ಸರಿಯಾಗಿ ಅಲ್ ನಸರ್ ಲೀಸರ್ ಲ್ಯಾಂಡ್ ನಲ್ಲಿ ನಡೆಯಲಿದೆ.‌ ಈ ಅದ್ದೂರಿ ಕಾರ್ಯಕ್ರಮದ ಪೂರ್ವ ಸಿದ್ಧತೆಗಳು ನಡೆಯುತ್ತಿದೆ.

ಕೋವಿಡ್ ಸಂಕಷ್ಟಗಳ ನಂತರ ನಡೆಯುತ್ತಿರುವ ಪ್ರಥಮ ಕನ್ನಡ ಸಂಗೀತ ಕಾರ್ಯಕ್ರಮದಲ್ಲಿ ಪ್ರಸಿದ್ಧ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಮತ್ತು ಅನುರಾಧ ಭಟ್, ಮೇಘನಾ ಭಟ್, ದುಬೈ ಉದ್ಯಮಿ ಹಾಗೂ ಖ್ಯಾತ ಗಾಯಕ ಹರೀಶ್ ಶೇರಿಗಾರ್ ಹಾಗೂ ಹಲವು ಗಾಯಕರು ಭಾಗವಹಿಸಲಿದ್ದು, ಈ ಸಂಗೀತ ಕಾರ್ಯಕ್ರಮದ ನಿರೂಪಣೆಯನ್ನು ನಿರೂಪಕಿ ಅನುಪಮ ಭಟ್, ಆರ್ ಜೆ ಎರಾಲ್ ನಡೆಸಿಕೊಡಲಿದ್ದಾರೆ ಎಂದು ತಿಳಿದುಬಂದಿದೆ.

ದುಬೈನ ಪುನೀತ್ ರಾಜಕುಮಾರ್ ಅಭಿಮಾನಿಗಳು ಆಯೋಜಿಸುತ್ತಿರುವ ಈ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು 0552443737, 0555592434, 050 3911719. ಅಥವಾ ನೇರವಾಗಿ http://www.eticketing.ae  ಮೂಲಕ ಟಿಕೆಟ್ ಕಾದಿರಿಸಬಹುದು.

Comments are closed.