UAE

ಚಂದ್ರಯಾನ-3 ಯಶಸ್ಸು: ಭಾರತವನ್ನು ಅಭಿನಂದಿಸಿದ ಯುಎಇ ಉಪಾಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ರಶೀದ್

Pinterest LinkedIn Tumblr

ದುಬೈ: ಚಂದ್ರನ ದಕ್ಷಿಣ ಧ್ರುವದಲ್ಲಿ ತನ್ನ ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಇಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತವನ್ನು ಯುಎಇ ಉಪಾಧ್ಯಕ್ಷ ಮತ್ತು ಪ್ರಧಾನಿ ಮತ್ತು ದುಬೈ ಆಡಳಿತಗಾರ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅಭಿನಂದಿಸಿದ್ದಾರೆ.

ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿನ ಸಂದೇಶದಲ್ಲಿ ಶೇಖ್ ಮೊಹಮ್ಮದ್ ಪೋಸ್ಟ್ ಮಾಡಿದ್ದಾರೆ “ಚಂದ್ರನ ಮೇಲೆ ಯಶಸ್ವಿ ಲ್ಯಾಂಡಿಂಗ್ ಮಾಡಲು ಶ್ರಮಿಸಿದ ಭಾರತದಲ್ಲಿನ ನಮ್ಮ ಸ್ನೇಹಿತರಿಗೆ ಅಭಿನಂದನೆಗಳು. ಪರಿಶ್ರಮದ ಮೂಲಕ ರಾಷ್ಟ್ರಗಳನ್ನು ನಿರ್ಮಿಸಲಾಗುತ್ತದೆ. ಭಾರತವು ಇತಿಹಾಸವನ್ನು ನಿರ್ಮಿಸುವುದನ್ನು ಮುಂದುವರೆಸಲಿ” ಎಂದಿದ್ದಾರೆ.

ಚಂದ್ರಯಾನ 3 ವಿವರ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಮೂರನೇ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಇಂದು ಸಂಜೆ ಸುಮಾರು 6.04 ಕ್ಕೆ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ.

ಜುಲೈ 14ರಂದು ಉಡಾವಣೆಗೊಂಡಿದ್ದ ಚಂದ್ರಯಾನ 3 ಇಂದು ಸಂಜೆ 6.04ಕ್ಕೆ ಸರಿಯಾಗಿ ಚಂದ್ರನ ಮೇಲ್ಮೈ ಮೇಲೆ ಸಾಫ್ಟ್ ಲ್ಯಾಂಡ್ ಆಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಸುಸೂತ್ರವಾಗಿ ಇಳಿಸಿದ ಮೊದಲ ದೇಶವಾಗಿ ಭಾರತ ಹೊರಹೊಮ್ಮಿದೆ.

 

Comments are closed.