Qatar

ಅಬುಧಾಬಿಯಲ್ಲಿ BAPS ಹಿಂದೂ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ

Pinterest LinkedIn Tumblr

ಅಬುಧಾಬಿ: ಅಬುಧಾಬಿಯಲ್ಲಿ ಬುಧವಾರ ಲೋಕಾರ್ಪಣೆಗೊಂಡ ಬಿಎಪಿಎಸ್ ಹಿಂದೂ ದೇವಾಲಯ ಏಕತೆ ಮತ್ತು ಸಾಮರಸ್ಯದ ಸಂಕೇತವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭವ್ಯ ಮಂದಿರವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಯುಎಇ ಒಂದು ಸುವರ್ಣ ಅಧ್ಯಾಯವನ್ನು ಬರೆದಿದೆ. ಹಿಂದೂ ದೇವಾಲಯ ಉದ್ಘಾಟನೆ ಹಿಂದೆ ಹಲವು ವರ್ಷಗಳ ಶ್ರಮವಿದೆ. ಸ್ವಾಮಿನಾರಾಯಣ ಅವರ ಆಶೀರ್ವಾದವೂ ಇದೆ. ಇದು ಏಕತೆ ಮತ್ತು ಸಾಮರಸ್ಯದ ಸಂಕೇತವಾಗಿದೆ. ದೇವಾಲಯ ನಿರ್ಮಾಣದಲ್ಲಿ ಯುಎಇ ಸರ್ಕಾರದ ಪಾತ್ರ ಶ್ಲಾಘನೀಯವಾಗಿದೆ ಎಂದರು.

ಈ ಮೊದಲು ಬುರ್ಜ್ ಖಲೀಫಾ, ಫ್ಯೂಚರ್ ಮ್ಯೂಸಿಯಂ, ಶೇಖ್ ಜಾಯೆದ್ ಮಸೀದಿ ಮತ್ತಿತರ ಹೈಟೆಕ್ ಕಟ್ಟಡಗಳಿಗೆ ಹೆಸರುವಾಸಿಯಾಗಿದ್ದ ಯುಎಇ ಇದೀಗ ತನ್ನ ಗುರುತಿಗೆ ಮತ್ತೊಂದು ಸಾಂಸ್ಕೃತಿಕ ಅಧ್ಯಾಯವನ್ನು ಸೇರಿಸಿದೆ. ಮುಂಬರುವ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಇಲ್ಲಿಗೆ ಆಗಮಿಸುವ ವಿಶ್ವಾಸವಿದೆ. ಇದು ಯುಎಇಗೆ ಬರುವ ಜನರ ಸಂಖ್ಯೆಯನ್ನು ಹೆಚ್ಚಿಸುತ್ತದೆ ಮತ್ತು ಜನರ ಸಂಪರ್ಕವೂ ಹೆಚ್ಚಾಗುತ್ತದೆ.ಇಡೀ ಭಾರತ ಮತ್ತು ಪ್ರಪಂಚದಾದ್ಯಂತ ವಾಸಿಸುವ ಲಕ್ಷಾಂತರ ಭಾರತೀಯರ ಪರವಾಗಿ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಮತ್ತುಯುಎಎ ಸರ್ಕಾರಕ್ಕೆ ಹೃತ್ಪೂರ್ವಕ ಕೃತಜ್ಞತೆ ವ್ಯಕ್ತಪಡಿಸುತ್ತೇನೆ ಎಂದರು.

ಇದಕ್ಕೂ ಮುನ್ನಾ ದೇವಸ್ಥಾನದ ಆವರಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಬಿಎಪಿಎಸ್‌ನ ಈಶ್ವರಚರಂದಾಸ್ ಸ್ವಾಮಿ ಸ್ವಾಗತಿಸಿದರು. ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಆರತಿ ಮಾಡಿದರು. ಬಸಂತ್ ಪಂಚಮಿಯ ಶುಭ ಸಂದರ್ಭದಲ್ಲಿ ದೇವಾಲಯವನ್ನು ಉದ್ಘಾಟಿಸಲಾಯಿತು. ಅಬುಧಾಬಿಯಲ್ಲಿನ ಬಿಎಪಿಎಸ್ ಹಿಂದೂ ದೇವಾಲಯದ ಉದ್ಘಾಟನೆಗೂ ಮುನ್ನ ಅರ್ಚಕರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.ಭವ್ಯವಾದ ಬೋಚಸನ್ವಾಸಿ ಅಕ್ಷರ ಪುರುಷೋತ್ತಮ್ ಸ್ವಾಮಿನಾರಾಯಣ ಸಂಸ್ಥಾ ಮಂದಿರ, ಅಬುಧಾಬಿಯ ಮೊದಲ ಹಿಂದೂ ದೇವಾಲಯವಾಗಿದೆ.

Comments are closed.