ಆರೋಗ್ಯ

ಜ್ವರ ಇದ್ದಾಗ ಈ ಹಣ್ಣುಗಳನ್ನು ತಿನ್ನಲು ಹೋಗಬೇಡಿ..

Pinterest LinkedIn Tumblr

jackfruit_benifit_1

 ವಿಶೇಷ ಸಲಹೆ: ಇದನ್ನು ತಿಂದರೆ ಜ್ವರ ಬರುವುದಿಲ್ಲ, ಆದರೆ ಜ್ವರ ಇದ್ದಾಗ ಈ ಹಣ್ಣುಗಳನ್ನು ತಿನ್ನಲು ಹೋಗಬೇಡಿ.

ಎಲ್ಲಾ ಕಾಲದಲ್ಲೂ ಸಿಗುವ ಹಣ್ಣು ಹಲಸು. ಹಲಸಿನ ಬೆಳೆ ಸೀಸನಲ್ ಅಲ್ಲ. ಹಳ್ಳಿಗಾಡುಗಳಲ್ಲಿ ಹುಡುಕುತ್ತಾ ಹೋದರೆ ದೇಶದ ಹಲಸು ಬೆಳೆಯುವ ಪ್ರದೇಶಗಳಲ್ಲಿ ಗಣನೀಯ ಮಟ್ಟಿಗೆ ಅಕಾಲ ಹಲಸು ಲಭ್ಯವಿದೆ. ಆದರೆ ಇದನ್ನು ಗುರುತಿಸಿ ಆರ್ಥಿಕ ಮತ್ತು ಸಾಮಾಜಿಕ ಪ್ರಯೋಜನ ತೆಗೆದುಕೊಳ್ಳುವ ಯತ್ನ ಆಗಿಯೇ ಇಲ್ಲ.

ಸಾಮಾನ್ಯವಾಗಿ ದೇಶದುದ್ದಗಲದಲ್ಲೂ ಮಾರ್ಚ್ ತಿಂಗಳಿಂದ ಜೂನ್ – ಜುಲೈವರೆಗೆ ಹಲಸಿನ ಋತು. ಆದರೆ ಆಸಕ್ತರ ಕಾಳಜಿಯಿಂದಾಗಿ ಋತುಪೂರ್ವ (ಅರ್ಲಿ ಸೀಸನ್), ಋತುನಂತರ (ಲೇಟ್ ಸೀಸನ್), ಎರಡು ಬಾರಿ ಬೆಳೆಕೊಡುವ (ಟ್ವೈಸ್ ಬೇರಿಂಗ್) ಮತ್ತು ಸರ್ವಕಾಲ (ಆಲ್ ಸೀಸನ್) – ಮೊದಲಾದ ಅಕಾಲದ ಹಲಸಿನ ಮರಗಳು ಸುದ್ದಿಯಾಗುತ್ತಿವೆ.

ಹಲಸಿನ ಹಣ್ಣಿನ ಆರೋಗ್ಯಕರ ಗುಣಗಳು:
1.ರೋಗನಿರೋದಕ ಶಕ್ತಿ ಹೆಚ್ಚು ಮಾಡುತ್ತದೆ:
ಹಲಸಿನ ಹಣ್ಣು ತಿಂದರೆ ಕಾಯಿಲೆ ಬರುತ್ತದೆ ಎಂದು ತಿನ್ನಲು ಭಯಪಡುವಾಗ ಇದನ್ನು ತಿಂದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಅಂದರೆ ಆಶ್ಚರ್ಯವಾಗುವುದು ಸಹಜ. ಹಲಸಿನ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಉತ್ತಮ ಪೋಷಕಾಂಶಗಳಿದ್ದು ಶೀತ, ಸೋಂಕು ಇವುಗಳನ್ನು ತಪ್ಪಿಸಲು ಸಹಕಾರಿಯಾಗಿದೆ. ಇದರಲ್ಲಿ antioxidant ಪ್ರಮಾಣ ಅಧಿಕವಾಗಿದೆ.

2. ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ:
ದೇಹದಲ್ಲಿ ಖನಿಜಾಂಶಗಳ ಕೊರತೆ ಉಂಟಾದರೆ ದೇಹದಲ್ಲಿ ಸಕ್ಕರೆ ಪ್ರಮಾಣ ಅಧಿಕವಾಗುತ್ತದೆ. ಹಲಸಿನ ಹಣ್ಣಿನಲ್ಲಿ ಖನಿಜಾಂಶಗಳು ಅಧಿಕವಾಗಿ ಇರುವುದರಿಂದ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ.

3. ಮೂಳೆ ಸವೆತವನ್ನು ತಡೆಗಟ್ಟುತ್ತದೆ:
ಈ ಹಣ್ಣಿನಲ್ಲಿ ಅಧಿಕ ಮ್ಯಾಗ್ನಿಷಿಯಂ ಮತ್ತು ಕ್ಯಾಲ್ಸಿಯಂ ಅಂಶವಿರುವುದರಿಂದ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ. ಮ್ಯಾಗ್ನಿಷಿಯಂ, ಕ್ಯಾಲ್ಸಿಯಂ, ಪೊಟಾಷ್ಯಿಯಂ ಅಧಿಕವಿರುವ ಆಹಾರ ತಿಂದರೆ ಮೂಳೆಗಳು ಗಟ್ಟಿಯಾಗುವುದು.

4. ಥೈರಾಯ್ಡ್ ಗ್ರಂಥಿಯನ್ನು ಆರೋಗ್ಯಕರವಾಗಿ ಇಡುತ್ತದೆ:
ಹಲಸಿನ ಹಣ್ಣಿನಲ್ಲಿರುವ ಖನಿಜಂಶಗಳು (micromineral) ಥೈರಾಯ್ಡ್ ಗ್ರಂಥಿಯ ಆರೋಗ್ಯವನ್ನು ಕಾಪಾಡುತ್ತದೆ. ದೇಹದಲ್ಲಿ ಹಾರ್ಮೋನ್ ಗಳ ಉತ್ಪತ್ತಿಯನ್ನು ಸರಿ ಪ್ರಮಾಣದಲ್ಲಿ ಇಡಲು ಥೈರಾಯ್ಡ್ ಗ್ರಂಥಿ ಮುಖ್ಯ ಪಾತ್ರವಹಿಸುತ್ತದೆ.

5. ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ:
ಒಂದು ಹಲಸಿನ ಹಣ್ಣಿನಲ್ಲಿ ಬಾಳೆಹಣ್ಣಿನಲ್ಲಿರುವಷ್ಟು ಪೊಟಾಷ್ಯಿಯಂ ಅಂಶವಿರುತ್ತದೆ. ಪೊಟಾಷ್ಯಿಯಂ ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ.

6. ಜೀರ್ಣಶಕ್ತಿ:
ಇದರಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಸಮಸ್ಯೆ ಇರುವವರು ಇದನ್ನು ತಿನ್ನುವುದು ಒಳ್ಳೆಯದು.

7. ಇರುಳು ಕುರುಡುತನ ನಿವಾರಣೆಗೆ ಸಹಕಾರಿಯಾಗಿದೆ:
ಇದರಲ್ಲಿ ಕ್ಯಾರೆಟ್ ನಲ್ಲಿರುವ ಕಾಲು ಭಾಗದಷ್ಟು ವಿಟಮಿನ್ ಎ ಅಂಶವಿರುವುದರಿಂದ ಹಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ವಿಟಮಿನ್ ಎ ಕೊರತೆ ಉಂಟಾದರೆ ಇರುಳು ಕುರುಡುತನ ಉಂಟಾಗುವುದು.

8.ಹೃದಯದ ಸ್ವಾಸ್ಥ್ಯ ಹೆಚ್ಚಿಸುತ್ತದೆ:
ಇದರಲ್ಲಿ ವಿಟಮಿನ್ ಬಿ6 ಅಂಶವಿರುವುದರಿಂದ ರಕ್ತದಲ್ಲಿರುವ homocystein ಪ್ರಮಾಣ ಕಡಿಮೆ ಮಾಡಿ ಹೃದಯದ ಸ್ವಾಸ್ಥ್ಯ ಹೆಚ್ಚಿಸಲು ಸಹಕಾರಿಯಾಗಿದೆ.

9. ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ:
ಇದರಲ್ಲಿರುವ ವಿಟಮಿನ್ ಮತ್ತು ಖನಿಜಾಂಶಗಳು ದೇಹದಲ್ಲಿ ರಕ್ತ ಸರಾಗವಾಗಿ ಹರಿಯಲು ಸಹಕಾರಿಯಾಗಿದೆ. ಮೂಳೆಗಳನ್ನು ಬಲಪಡಿಸಿ ಶರೀರದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯನ್ನು ತಡೆಗಟ್ಟುತ್ತದೆ.

10. ರಕ್ತ ಹೀನತೆಯನ್ನು ತಡೆಗಟ್ಟುತ್ತದೆ:
ಇದರಲ್ಲಿ ಕಬ್ಬಿಣದಂಶ ಕೂಡ ಇರುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಗೆ ಇದನ್ನು ತಿನ್ನುವುದು ಒಳ್ಳೆಯದು.

Comments are closed.