ಆರೋಗ್ಯ

ಅನಾನಸ್ ಹಣ್ಣಿನ ನಿಯಮಿತ ಸೇವನೆ – ಆರೋಗ್ಯ ಅಭಿವೃದ್ಧಿಯೊಂದಿಗೆ ಸುಖಕರ ಜೀವನ

Pinterest LinkedIn Tumblr

ಮಂಗಳೂರು: ದಿನವೂ ಊಟದ ನಂತರ ಅನಾನಸ್ ಹಣ್ಣಿನ ಹೋಳುಗಳಿಗೆ ಸ್ವಲ್ಪ ಉಪ್ಪು ಮತ್ತು ಸ್ವಲ್ಪ ಕರಿಮೆಣಸಿನ ಪುಡಿಯನ್ನು ಹಚ್ಚಿ ಸೇವಿಸುವುದರಿಂದ ಅಜೀರ್ಣ ರೋಗ ದೂರವಾಗುತ್ತದೆ.
*ಅನಾನಸ್ ಹಣ್ಣಿನ ಹೋಳುಗಳಿಗೆ ಸ್ವಲ್ಪ ಕಾಳುಮೆಣಸಿನ ಪುಡಿಯನ್ನು ಹಚ್ಚಿ ಸೇವಿಸುವುದರಿಂದ ಆಮ್ಲಪಿತ್ತ (Acidity) ದೂರವಾಗುತ್ತದೆ.

*ಅನಾನಸ್ ಹಣ್ಣನ್ನು ನಿಯಮಿತವಾಗಿ ಸೇವಿಸುವುದರಿಂದ ಗಂಟಲುಬೇನೆ ಗುಣವಾಗುತ್ತದೆ.

* ಪ್ರತಿದಿನ ತಾಜಾ ಅನಾನಸ್ ಹಣ್ಣನ್ನು ಸೇವಿಸುವುದರಿಂದ ಹೃದಯದ ದುರ್ಬಲತೆ ದೂರವಾಗುತ್ತದೆ.

*ಮೂತ್ರ ಕಟ್ಟುವುದು, ಪಿತ್ತಕೋಶ ಊದಿಕೊಳ್ಳುವುದು, ಕಣ್ಣಿನ ಸುತ್ತಮುತ್ತ ಊದಿಕೊಳ್ಳುವುದು ಮುಂತಾದ ತೊಂದರೆಗಳಿಗೆ ತಾಜಾ ಅನಾನಸ್ ಹಣ್ಣನ್ನು ತಿಂದು ಹಾಲು ಕುಡಿಯಬೇಕು. ಬೇರೆ ಏನನ್ನೂ ಸೇವಿಸಬಾರದು. ಹೀಗೆ ಮಾಡುವುದರಿಂದ ಒಂದು ವಾರದಲ್ಲಿ ಗುಣವಾಗುವುದು.

*ಅನಾನಸ್ ಹಣ್ಣನ್ನು ನಿಯಮಿತವಾಗಿ ಸೇವಿಸುವುದರಿಂದ ಧೂಮಪಾನದಿಂದ ಉಂಟಾಗುವ ಅನೇಕ ದುಷ್ಪರಿಣಾಮಗಳು ದೂರವಾಗುತ್ತವೆ.

*ಅನಾನಸ್ ಹಣ್ಣಿನ ರಸವನ್ನು ಕಜ್ಜಿ, ತುರಿಕೆ ಇದ್ದಲ್ಲಿ ಹಚ್ಚಿ ತಿಕ್ಕಿದರೆ ವಾಸಿಯಾಗುತ್ತವೆ.

*ಅನಾನಸ್ ಹಣ್ಣಿಗೆ ಕರಿಮೆಣಸಿನ ಪುಡಿಯನ್ನು ಹಾಕಿ ಸೇವಿಸಿದರೆ ಕೆಮ್ಮು, ಕಫಾ ಕಡಿಮೆ ಆಗುತ್ತದೆ.

*ಅನಾನಸ್ ಹಣ್ಣಿನ ಹೋಳುಗಳನ್ನು ಜೇನುತುಪ್ಪದೊಡನೆ ಸೇವಿಸುವುದರಿಂದ ಯಕೃತ್ತಿನ ದೋಷ ಮತ್ತು ಅರಿಶಿನ ಕಾಮಾಲೆ ಗುಣವಾಗುತ್ತದೆ.
ಹೆಚ್ಚಾದರೆ ಅಮೃತವು ವಿಷವಾಗುತ್ತದೆ ನಿಮ್ಮ ದೇಹಕ್ಕೆ ಎಷ್ಟು ಸಾಮರ್ಥ್ಯ ಇದೆ ಅಷ್ಟು ಉಪಯೋಗ ಮಾಡಿ.

ಮಾಹಿತಿ: ಸಂಗ್ರಹ

Comments are closed.