ಆರೋಗ್ಯ

ಮೊಡವೆ ಗುಳ್ಳೆಗಳಿಗೆ ಇದು ತುಂಬಾ ಪರಿಣಾಮಕಾರಿ ಮನೆಮದ್ದು

Pinterest LinkedIn Tumblr

1. ಮೊಡವೆ, ಗುಳ್ಳೆ: ಬೇವಿನಲ್ಲಿ ಉರಿನಿವಾರಕ ಅಂಶವಿರುವುದರಿಂದ ಮೊಡವೆ ಗುಳ್ಳೆಗಳಿಗೆ ತುಂಬಾ ಪರಿಣಾಮಕಾರಿ. ಅಷ್ಟೇ ಅಲ್ಲದೆ ತ್ವಚೆಯ ಹೊಳಪನ್ನೂ ಇದು ಹೆಚ್ಚಿಸುತ್ತದೆ.
2. ವಿಷಕಾರಿ ಅಂಶದ ನಿರ್ಮೂಲನೆ: ಬೇವಿನ ರಸ ಕುಡಿಯುವುದರಿಂದ ದೇಹದಲ್ಲಿನ ವಿಷಕಾರಿ ಅಂಶಗಳು ತೊಲಗಿ ಜೀರ್ಣಕ್ರಿಯೆಯನ್ನು ಸರಾಗಗೊಳಿಸುತ್ತೆ ಮತ್ತು ಕೂದಲಿನ ಬೆಳವಣಿಗೆಗೆಗೂ ಸಹಕಾರಿ.
3. ಮಧುಮೇಹ: ಮಧುಮೇಹಿಗಳಿಗೆ ಬೇವಿನ ರಸ ತುಂಬಾ ಪರಿಣಾಮಕಾರಿ ಎನ್ನಲಾಗಿದೆ. ದಿನವೂ ಬೇವಿನ ರಸ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಅಂಶ ಕಡಿಮೆಗೊಳ್ಳುತ್ತದೆ

೧.ಅರಿಸಿನವನ್ನು ಹಾಲಿನ ಕೆನೆಯೊಂದಿಗೆ ಸೇರಿಸಿ ಮುಖಕ್ಕೆ ಹಚ್ಚುವುದರಿಂದ, ಮುಖದಲ್ಲಿನ ಗುಳ್ಳೆಗಳು ಕಮ್ಮಿಯಾಗುತ್ತವೆ ಮತ್ತು ಹೊಳಪು ಬರುತ್ತದೆ.
೨.ಅರಿಸಿನದ ಪುಡಿಯನ್ನು ಕಡಲೆಹಿಟ್ಟಿಗೆ ಬೆರೆಸಿ,ಹಾಲಿನೊಂದಿಗೆ ಕಲೆಸಿ ಸಹ ಮುಖಕ್ಕೆ ಹಚ್ಚಬಹುದು.
೩.ಅರಿಶಿನದ ಪುಡಿಯನ್ನು ಸ್ವಲ್ಪ ಬಿಸಿ ಮಾಡಿದ ಹಾಲಿಗೆ ಬೆರೆಸಿ ಕುಡಿಯುವುದರಿಂದ ಕೆಮ್ಮು ಸ್ವಲ್ಪ ಮಟ್ಟಿಗೆ ಕಮ್ಮಿಯಾಗುತ್ತದೆ.
೪.ಇದು ಆಂಟಿಸೆಪ್ಟಿಕ್ ಆಗಿರುವುದರಿಂದ ದಿನನಿತ್ಯ ಅಡಿಗೆಯಲ್ಲಿ ಬಳಸುವುದರಿಂದ ಆರೋಗ್ಯಕ್ಕೆ ಉತ್ತಮ.
೫.ಸಣ್ಣ ಪುಟ್ಟ ಗಾಯಗಳಾಗಿ ರಕ್ತ ಬರುತ್ತಿರುವಾಗ ಈ ಅರಿಶಿಣದ ಪುಡಿಯನ್ನು ಗಾಯದ ಮೇಲೆ ಹಾಕಿ ಅದುವುದರಿಂದ ರಕ್ತ ಬರುವುದು ನಿಲ್ಲುತ್ತದೆ. (ಚಿಕ್ಕ ಗಾಯಗಳಿಗೆ) ಆಂಟಿಸೆಪ್ಟಿಕ್ ಆಗಿರುವುದರಿಂದ ಬೇಗನೆ ಗಾಯವೂ ಒಣಗುತ್ತದೆ/ಮಾಯುತ್ತದೆ.

ಸೋಂಪು ಕಾಳನ್ನು ಪ್ರತಿದಿನ ಊಟವಾದ ಬಳಿಕ ಒಂದೆರಡು ಚಮಚ ತಿನ್ನುವುದರಿಂದ ಅಜೀರ್ಣ ನಿವಾರಣೆಯಾಗುತ್ತದೆ.ಊಟದ ನಂತರ ತಿನ್ನುವುದರಿಂದ ಬಾಯಲ್ಲಿನ ವಾಸನೆಯೂ ಕಮ್ಮಿಯಾಗುತ್ತದೆ.
ಸೋಂಪು ಕಾಳನ್ನು ರಾತ್ರಿ ನೀರಿನಲ್ಲಿ ನೆನೆಸಿ, ಬೆಳಗ್ಗೆ ಅದರ ನೀರಿನಿಂದ ಕಣ್ಣುಗಳನ್ನು ತೊಳೆಯುವುದರಿಂದ ಕಣ್ಣಿನ ಅನೇಕ ತೊಂದರೆಗಳು ನಿವಾರಣೆಗಳಾಗುತ್ತವೆ.
ಸೋಂಪು ಅನ್ನು ನೀರಿನಲ್ಲಿ ಕುದಿಸಿ, ಅದರ ಡಿಕಾಕ್ಷನ್ ತಯಾರಿಸಿ, ಅದನ್ನು ಸೇವಿಸುವುದರಿಂದ ಮಹಿಳೆಯರಲ್ಲಿ ಮಾಸಿಕ ದಿನಗಳಲ್ಲಿ ಉಂಟಾಗುವ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಹೊಟ್ಟೆನೋವು ಮತ್ತು ಇತರೆ ತೊಂದರೆ ನಿವಾರಣೆ. ಪೀರಿಯಡ್ಸ್ ಕೂಡ ರೆಗ್ಯುಲರ್ ಆಗಿ ಇರುತ್ತದೆ.
ಇದು ಮಕ್ಕಳಿಗೂ ಒಳ್ಳೆಯದು. ಇದರಿಂದ ಅವರಲ್ಲಿ ಉಂಟಾಗುವ ಉದರ ತೊಂದರೆಗಳ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ.

Comments are closed.