ಆರೋಗ್ಯ

ಗೋಧಿ ಹಿಟ್ಟಿನ ತಂಬಿಟ್ಟು ತಿಂದರೆ ಎಲುಬು ನೋವು ಶಮನ

Pinterest LinkedIn Tumblr

· ಗೋಧಿ ಹಿಟ್ಟಿನ ತಂಬಿಟ್ಟು ಮಾಡಿಕೊಂಡು ತಿಂದರೆ ಮತ್ತು ಎಲುಬು ನೋವು ಶಮನಗೊಳ್ಳುವುದು.

· ಸೀತಾಫಲ ತಂಪುಕಾರಕವಾಗಿದ್ದು ಸೇವನೆಯಿಂದ ರಕ್ತವೃದ್ಧಿಯಾಗುವುದರ ಜತೆಗೆ ಸ್ನಾಯುಗಳು ಬಲಗೊಳ್ಳುತ್ತವೆ.

· ಉದ್ದಿನ ಬೇಳೆಯನ್ನು ಹುರಿದು ಹಾಲಿನಲ್ಲಿ ಬೇಯಿಸಿ ಸಕ್ಕರೆ, ಏಲಕ್ಕಿ ಸೇರಿಸಿ ಪಾಯಸ ಮಾಡಿ ಸೇವಿಸುವುದರಿಂದ ವೀರ್ಯ ವೃದ್ಧಿಯಾಗಿ ಶಾರೀರಿಕ ಬಲ ಹೆಚ್ಚುವುದು.

· ಉದ್ದಿನ ಬೇಳೆ ತೊವ್ವೆಯನ್ನು ತಯಾರಿಸಿ ಊಟದ ಜತೆ ಸೇವಿಸಿದರೆ ಅಂಗಾಂಗಗಳು ಬಲಗೊಳ್ಳುವುವು

· ನರದ ದೌರ್ಬಲ್ಯ ಇರುವವರಿಗೆ, ಹೃದ್ರೋಗದಿಂದ ಬಳಲುವವರಿಗೆ ಇದು ಉತ್ತಮವಾಗಿದೆ

ರಕ್ತಸ್ರಾವ
· ದೇಹದ ಯಾವುದೇ ಭಾಗ ಕೊಯ್ದುಕೊಂಡು ರಕ್ತ ಒಸರುತ್ತಿದ್ದರೆ, ಆ ಗಾಯದ ಮೇಲೆ ಅರಿಶಿನ ಹುಡಿಯನ್ನು ಉದುರಿಸಿದರೆ ರಕ್ತ ಬರುವುದು ನಿಲ್ಲುವುದು

· ಹಾಗಲಕಾಯಿಯ ಗೊಜ್ಜು ಮಾಡಿಕೊಂಡು ಕ್ರಮವಾಗಿ ಸೇವಿಸುತ್ತಿದ್ದರೆ ರಕ್ತ ಶುದ್ಧಿಯಾಗುವುದು.

· ರಕ್ತಹೀನತೆ, ಗಾಯದ ನೋವು, ರಕ್ತಸ್ರಾವ.

· ಊಟದ ಜತೆ ಹಲವು ದಿನಗಳವರೆಗೆ ಪ್ರತಿನಿತ್ಯ ಹಸಿ ಈರುಳ್ಳಿಯನ್ನು ತಿನ್ನುವುದರಿಂದ ರಕ್ತಹೀನತೆ ವಾಸಿಯಾಗುತ್ತದೆ.

· ಪಟಾಕಿ ಸಿಡಿದು ಉಂಟಾದ ಗಾಯಗಳಿಗೆ ಈರುಳ್ಳಿಯನ್ನು ಜಜ್ಜಿ ಕಟ್ಟುವುದರಿಂದ ನೋವು ಕಡಿಮೆಯಾಗುತ್ತದೆ.

· ಮೂಗಿನಿಂದ ಆಗಾಗ್ಗೆ ರಕ್ತ ಒಸರುತ್ತಿದ್ದರೆ, ಮೂಗಿಗೆ ಒಂದೆರಡು ತೊಟ್ಟು ಈರುಳ್ಳಿ ರಸವನ್ನು ಹಾಕುವುದರಿಂದ ರಕ್ತ ಒಸರುವುದು ನಿಲ್ಲುವುದು.

Comments are closed.