ಆರೋಗ್ಯ

ಜಂತುಹುಳುಗಳ ಉಪಟಳ ಜಾಸ್ತಿಯಾದಾಗ ಕರಿಮೆಣಸಿನ ಕಷಾಯ ಉತ್ತಮ ಪರಿಹಾರ

Pinterest LinkedIn Tumblr

ಸೀತಾಫಲ ವಾಂತಿ ಹಾಗೂ ಹೊಟ್ಟೆ ಉರಿ ಶಮನವಾಗುತ್ತದೆ.
· ಗೋಧಿ ಹಿಟ್ಟಿನಲ್ಲಿ ಚಪಾತಿ ಮಾಡಿ ತಿನ್ನುವುದರಿಂದ ಹೊಟ್ಟೆಯಹುಣ್ಣು ನಿವಾರಣೆಯಾಗುವುದು
· ಬೆಲ್ಲದಲ್ಲಿ ಕಾಳುಮೆಣಸಿನಪುಡಿ ಬೆರೆಸಿ ಸೇವಿಸಿದರೆ ನೋವು ಶಮನವಾಗುತ್ತದೆ.
· ಹೊಟ್ಟೆಯಲ್ಲಿ ಜಂತುಹುಳುಗಳ ಉಪಟಳ ಜಾಸ್ತಿಯಾದಾಗ ಬೆಳಗ್ಗೆ ಮತ್ತು ರಾತ್ರಿ ಮೆಣಸಿನ ಕಷಾಯವನ್ನು ಕುಡಿಯುವುದು ಪರಿಣಾಮಕಾರಿ
· ಜಂತುಹುಳುಗಳಿಂದ ಬಳಲುತ್ತಿರುವವರು ಐದು ಖರ್ಜೂರ ತಿಂದು ನಿಂಬೆಹಣ್ಣಿನ ಪಾನೀಯ ಕುಡಿದರೆ ಶಮನವಾಗುವುದು
· ಹಲಸಿನ ಹಣ್ಣನ್ನು ಜೇನುತುಪ್ಪದೊಡನೆ ತಿನ್ನುತ್ತಾ ಬಂದರೆ ಪಿತ್ತವಿಕಾರಗಳು ಶಮನಗೊಳ್ಳುವುದು.
· ಹಲಸಿನ ತೊಳೆಗಳನ್ನು ಸಣ್ಣದಾಗಿ ತುಂಡುಮಾಡಿ ಬಾಳೆಹಣ್ಣು, ಜೇನುತುಪ್ಪದೊಡನೆ ಸೇವಿಸಿದರೆ ದೈಹಿಕ ಶಕ್ತಿ ಹೆಚ್ಚುವುದಲ್ಲದೇ ನರಗಳ ದೌರ್ಬಲ್ಯ ಕಡಿಮೆಯಾಗುತ್ತದೆ.
· ಹಲಸಿನ ಸೇವನೆಯಿಂದ ವೀರ್ಯ್ ವೃದ್ಧಿಯೂ ಆಗುತ್ತದೆ. ಅತಿಯಾಗಿ ತಿಂದರೆ ಹೊಟ್ಟೆನೋವು ಬರುವ ಸಾಧ್ಯತೆ ಇದೆ.
· ಹಾಗಲಕಾಯಿಯ ಗೊಜ್ಜು ಮಾಡಿಕೊಂಡು ಕ್ರಮವಾಗಿ ಸೇವಿಸುತ್ತಿದ್ದರೆ ಕರುಳಿನ ಹುಣ್ಣು, ನಿವಾರಣೆಯಾಗುವುದು
· ಮಾವಿನಹಣ್ಣನ್ನು ಹಿತಮಿತವಾಗಿ ತಿಂದರೆ ವಾಯು ಶಮನಗೊಳ್ಳುವುದು
· ವೀಳ್ಯದೆಲೆಗೆ ಹರಳೆಣ್ಣೆಯನ್ನು ಹಚ್ಚಿ ಅದನ್ನು ಬಿಸಿ ಮಾಡಿ ಹೊಟ್ಟೆ ಉಬ್ಬರದಿಂದ ನರಳುತ್ತಿರುವ ಮಗುವಿನ ಹೊಟ್ಟೆಗೆ ಕಾವು ಕೊಟ್ಟರೆ ನೋವು ಮಾಯವಾಗಿ ಮೂತ್ರ ಸುಲಭವಾಗಿ ಆಗುವುದು

Comments are closed.