ಆರೋಗ್ಯ

ಅಸ್ತಮಾಗೆ ಜೇನು ಉತ್ತಮ ಮನೆಮದ್ದು

Pinterest LinkedIn Tumblr

ಜೇನು : ಅಸ್ತಮಾ ಕಾಣಿಸಿಕೊಂಡಾಗ ಬಿಸಿ ನೀರಿನಲ್ಲಿ ಜೇನನ್ನು ಹಾಕಿ ಅದರ ಆವಿಯನ್ನು ತೆಗೆದುಕೊಂಡರೆ ಬೇಗ ಪರಿಣಾಮ ಬೀರುತ್ತದೆ. ಒಂದು ಲೋಟ ನೀರಿಗೆ ಒಂದು ಚಮಚ ಜೇನು ಬೆರೆಸಿ ಅದನ್ನು ದಿನಕ್ಕೆ ಮೂರು ಬಾರಿ ಕುಡಿದರೆ ಅಸ್ತಮಾ ನಿಯಂತ್ರಿಸಬಹುದು.

ಮೂಲಂಗಿ:ಒಂದು ಕಪ್ ತುರಿದ ಮೂಲಂಗಿ, ಒಂದು ಚಮಚ ಜೇನು ಮತ್ತು ಒಂದು ಚಮಚ ನಿಂಬೆರಸ ಬೆರೆಸಿ 20 ನಿಮಿಷ ಕಾಯಿಸಿ ಇದನ್ನು ದಿನವೂ ಒಂದು ಚಮಚ ಸೇವಿಸುತ್ತಾ ಬಂದರೆ ಪರಿಣಾಮಕಾರಿಯಾಗಿ ಅಸ್ತಮಾ ನಿವಾರಿಸುತ್ತದೆ.

ಹಾಗಲಕಾಯಿ:ಹಾಗಲಕಾಯಿ ಅಸ್ತಮಾಗೆ ಮತ್ತೊಂದು ಪರಿಣಾಮಕಾರಿ ಮದ್ದು. ಜೇನಿನೊಂದಿಗೆ ಹಾಗಲಕಾಯಿ ಪೇಸ್ಟ್, ತುಳಸಿ ಎಲೆ ರಸ ಸೇರಿಸಿ ಕುಡಿಯುವುದರಿಂದ ಅಲರ್ಜಿ ನಿವಾರಿಸಿ ಅಸ್ತಮಾ ಬರುವುದನ್ನು ತಡೆಗಟ್ಟುತ್ತದೆ.

ಮೆಂತ್ಯೆಕಾಳು:ಮೆಂತ್ಯೆಕಾಳಿನಲ್ಲಿ ಅಲರ್ಜಿ ನಿವಾರಿಸಬಲ್ಲ ಶಕ್ತಿಯಿದೆ. ನೀರಿನೊಂದಿಗೆ ಮೆಂತ್ಯೆ ಕಾಳು ಬೇಯಿಸಿ ಅದಕ್ಕೆ ಒಂದು ಚಮಚ ಜೇನು ಮತ್ತು ಶುಂಠಿ ರಸದೊಂದಿಗೆ ಬೆರೆಸಿ ದಿನಕ್ಕೊಮ್ಮೆ ಸೇವಿಸಿದರೆ ಚಳಿಗಾಲದಲ್ಲಿ ಅಸ್ತಮಾ ಕಡಿಮೆ ಮಾಡಬಹುದು.

Comments are closed.