ಆರೋಗ್ಯ

ಮಕ್ಕಳಿಗೆ ಕಫ ಕೂಡಿದ ಕೆಮ್ಮು ಬಂದರೆ, ತುಳಸಿಯ ದಳವನ್ನ ಜೇನಿನಲ್ಲಿ ಅದ್ದಿ ತಿನ್ನಿಸಿದರೆ ಪರಿಣಾಮಕಾರಿ

Pinterest LinkedIn Tumblr

ಬೆಲ್ಲದಲ್ಲಿ ಅರಿಶಿಣಪುಡಿ ಸೇರಿಸಿ ಸೇವಿಸಿದರೆ ಒಣಕೆಮ್ಮು ನಿವಾರಣೆಯಾಗಿ ಗಂಟಲಿಗೆ ಹಿತವಾಗಿರುತ್ತದೆ.
· ಒಣಕೆಮ್ಮು ಕಾಣಿಸಿಕೊಂಡಾಗ ಏಲಕ್ಕಿ ಪುಡಿಗೆ ಸ್ವಲ್ಪ ಶುಂಠಿ ಪುಡಿಯನ್ನು ಸೇರಿಸಿ ಸೇವಿಸಿದರೆ ಪರಿಣಾಮ ಬೀರುವುದು.
· ಹಾಗಲಕಾಯಿಯ ಗೊಜ್ಜು ಮಾಡಿಕೊಂಡು ಕ್ರಮವಾಗಿ ಸೇವಿಸಿದರೆ ಕೆಮ್ಮು ನಿವಾರಣೆಯಾಗುವುದು.
· ಸಾಧಾರಣ ಕೆಮ್ಮು ಕಾಣಿಸಿಕೊಂಡಾಗ ಕಲ್ಲುಸಕ್ಕರೆ ಮತ್ತು ಲವಂಗವನ್ನು ಬಾಯಿಗೆ ಹಾಕಿಕೊಂಡು ಜಗಿದು ರಸ ನುಂಗುವುದರಿಂದ ಶಮನವಾಗುವುದು
· ಒಂದು ವೀಳ್ಯದೆಲೆ, ಸ್ವಲ್ಪ ಕರೀ ತುಳಸಿ ಹಾಗೂ ಒಂದು ಲವಂಗವನ್ನು ಅರೆದು ದಿನಕ್ಕೆ ಎರಡು ಬಾರಿ ಸೇವಿಸಿದರೆ ಕೆಮ್ಮು ಕಡಿಮೆಯಾಗುವುದು
· ಕೆಮ್ಮುನೆಗಡಿ ಇರುವಾಗ ತುಳಸಿಯ ರಸವನ್ನು ಜೇನುತುಪ್ಪದೊಂದಿಗೆ ಬೆರೆಸಿ ಸೇವಿಸಬೇಕು
· ಮಕ್ಕಳಿಗೆ ಕಫ ಕೂಡಿದ ಕೆಮ್ಮು ಬಂದಾಗ ತುಳಸಿಯ ದಳ ಜೇನಿನಲ್ಲಿ ಅದ್ದಿ ತಿನ್ನಿಸಬೇಕು
· ಹಸಿಶುಂಠಿಯ ಕಷಾಯಕ್ಕೆ ಸಕ್ಕರೆ ಬೆರೆಸಿ ದಿನಕ್ಕೆ ಮೂರು ಬಾರಿ ಸೇವಿಸಿದರೆ ನೆಗಡಿ ನಿವಾರಣೆಯಾಗುವುದು.
· ನೆಗಡಿಯಿರುವವರು ಬಿಸಿಯಾದ ಕಡಲೆಯನ್ನು ತಿನ್ನುವುದರಿಂದ ಶೀತ ಕಡಿಮೆಯಾಗುತ್ತದೆ

· ಎಲ್ಲ ಬಗೆಯ ಜ್ವರದ ಪೀಡೆಗೆ ತುಳಸಿಯ ಕಷಾಯ ಪರಿಣಾಮಕಾರಿಯಾಗಿದೆ.

Comments are closed.