ಆರೋಗ್ಯ

ಅಧಿಕ ಕೆಲಸದಿಂದ ಉಂಟಾದ ದೈಹಿಕ ಮತ್ತು ಮಾನಸಿಕ ಒತ್ತಡ ನಿವಾರಣೆಗೆ ಈ ಟಿಪ್ಸ್

Pinterest LinkedIn Tumblr

· ನಿಶ್ಯಕ್ತಿಯಿಂದ ಬಳಲುವವರು, ಹೆಚ್ಚು ವ್ಯಾಯಾಮ ಮಾಡುವವರು ಎರಡು ಮೂರು ಚಮಚದಷ್ಟು ಕಡಲೇ ಕಾಳನ್ನು ತಣ್ಣೀರಿನಲ್ಲಿ ರಾತ್ರಿ ನೆನೆಸಿಟ್ಟು ಬೆಳಗ್ಗೆ ಒಣದ್ರಾಕ್ಷಿಯ ಜತೆ ಅಗಿದು ಸೇವಿಸಿ ನಂತರ ಹಾಲು ಕುಡಿದರೆ ನಿಶ್ಯಕ್ತಿ ಕಡಿಮೆಯಾಗುವುದು.:
· ಗರ್ಭಿಣಿಯರಿಗೆ ಮತ್ತು ಇತರರಿಗೆ ಆಗಾಗ್ಗೆ ನಿತ್ರಾಣವೆನಿಸಿದಾಗ ಬಿಸಿ ಹಾಲಿನ ಜೊತೆ ಸ್ವಲ್ಪ ಬೆಲ್ಲ ಸೇರಿಸಿ ಕುಡಿಯುವುದರಿಂದ ಚೈತನ್ಯ ಮೂಡುವುದು.
· ಹಾಲುಣಿಸುವ ತಾಯಂದಿರು ಹಣ್ಣನ್ನು ನಿಯಮಿತವಾಗಿ ಬಳಸುವುದರಿಂದ ಶಕ್ತಿ ಹೆಚ್ಚುವುದು.
· ಅಂಜೂರದ ಹಣ್ಣುಗಳ ಸೇವನೆಯಿಂದ ಅಧಿಕ ಕೆಲಸದಿಂದ ಉಂಟಾದ ದೈಹಿಕ ಮತ್ತು ಮಾನಸಿಕ ಒತ್ತಡ ನಿವಾರಣೆಯಾಗುವುದು. ನವ ಚೈತನ್ಯ ಮೂಡುವುದು.

Comments are closed.