ಆರೋಗ್ಯ

ದೈಹಿಕ ಮತ್ತು ಮಾನಸಿಕ ಒತ್ತಡ ನಿವಾರಣೆಗೆ ಈ ಟಿಪ್ಸ್

Pinterest LinkedIn Tumblr

ನಿಶ್ಯಕ್ತಿಯಿಂದ ಬಳಲುವವರು, ಹೆಚ್ಚು ವ್ಯಾಯಾಮ ಮಾಡುವವರು ಎರಡು ಮೂರು ಚಮಚದಷ್ಟು ಕಡಲೇ ಕಾಳನ್ನು ತಣ್ಣೀರಿನಲ್ಲಿ ರಾತ್ರಿ ನೆನೆಸಿಟ್ಟು ಬೆಳಗ್ಗೆ ಒಣದ್ರಾಕ್ಷಿಯ ಜತೆ ಅಗಿದು ಸೇವಿಸಿ ನಂತರ ಹಾಲು ಕುಡಿದರೆ ನಿಶ್ಯಕ್ತಿ ಕಡಿಮೆಯಾಗುವುದು
ಗರ್ಭಿಣಿಯರಿಗೆ ಮತ್ತು ಇತರರಿಗೆ ಆಗಾಗ್ಗೆ ನಿತ್ರಾಣವೆನಿಸಿದಾಗ ಬಿಸಿ ಹಾಲಿನ ಜೊತೆ ಸ್ವಲ್ಪ ಬೆಲ್ಲ ಸೇರಿಸಿ ಕುಡಿಯುವುದರಿಂದ ಚೈತನ್ಯ ಮೂಡುವುದು.
ಹಾಲುಣಿಸುವ ತಾಯಂದಿರು ಹಣ್ಣನ್ನು ನಿಯಮಿತವಾಗಿ ಬಳಸುವುದರಿಂದ ಶಕ್ತಿ ಹೆಚ್ಚುವುದು.
ಅಂಜೂರದ ಹಣ್ಣುಗಳ ಸೇವನೆಯಿಂದ ಅಧಿಕ ಕೆಲಸದಿಂದ ಉಂಟಾದ ದೈಹಿಕ ಮತ್ತು ಮಾನಸಿಕ ಒತ್ತಡ ನಿವಾರಣೆಯಾಗುವುದು. ನವ ಚೈತನ್ಯ ಮೂಡುವುದು.

Comments are closed.