
ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಯೋಚನೆಯು ಮೊದಲು ಆರಂಭವಾಗಿದ್ದು ಜಪಾನ್ ನಲ್ಲಿ. ಜಪಾನಿನಲ್ಲಿ ಜನರು ಹಲ್ಲುಜ್ಜುವ ಮೊದಲು ನಾಲ್ಕು ಲೋಟ ನೀರು ಕುಡಿಯುತ್ತಾರೆ. ಉಪ್ಪು ಬೆರೆಸಿದ ಬೆಚ್ಚನೆಯ ನೀರು, ಆಯಸ್ಸು ನೂರು! ಇದರ ಬಳಿಕ ಅವರು ಅರ್ಧ ಗಂಟೆ ಏನೂ ತಿನ್ನುವುದಿಲ್ಲ ಅಥವಾ ಕುಡಿಯುವುದಿಲ್ಲ. ಈ ನೀರಿನ ಥೆರಪಿ ನಿಮ್ಮನ್ನು ಆರೋಗ್ಯಕರ ಹಾಗೂ ಚಟುವಟಿಕೆಯಿಂದಿಡುತ್ತದೆ. ಜಪಾನ್ ನ ಜನರು ವಿಶ್ವದಲ್ಲೇ ಅತ್ಯಂತ ಹೆಚ್ಚು ಚಟುವಟಿಕೆ ಹಾಗೂ ದಕ್ಷತೆಯನ್ನು ಹೊಂದಿರುವವರೆಂಬ ಹೆಗ್ಗಳಿಕೆಯಿದೆ.
ಬೆಳ್ಳಂ ಬೆಳಿಗ್ಗೆ ಎದ್ದು ಎಳನೀರು ಕುಡಿಯಿರಿ, ಆರೋಗ್ಯ ಪಡೆಯಿರಿ ಬೆಳಗ್ಗೆ ಎದ್ದು ನೀರು ಕುಡಿಯುವುದರಿಂದ ಹಲವಾರು ರೀತಿಯ ಉಪಯೋಗಗಳಿವೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ನೀರು ಜಾದು ಮಾಡಬಲ್ಲದು. ನೀವು ಊಟವಾದ ಬಳಿಕ ಬಿಸಿ ನೀರು ಕುಡಿಯಿರಿ. ಇದರಿಂದ ನೀವು ತಿಂದ ಆಹಾರದಲ್ಲಿರುವ ಎಣ್ಣೆ ಕೊಬ್ಬಾಗಿ ಪರಿವರ್ತಿತವಾಗುವುದಿಲ್ಲ. ಬೆಳಗ್ಗಿನ ಅವಧಿಯಲ್ಲಿ ಬಿಸಿನೀರು ಕುಡಿಯಲು ಪ್ರಯತ್ನಿಸಿ. ಬೆಳಗ್ಗಿನ ವೇಳೆ ಬಿಸಿ ನೀರು ಕುಡಿದರೆ ಆಗುವ ಅದ್ಭುತ ಆರೋಗ್ಯ ಲಾಭಗಳು ಇಲ್ಲಿವೆ.
ಕರುಳಿನ ಕ್ರಿಯೆ ಸರಾಗ : ಬೆಳಗ್ಗೆ ಎದ್ದು ನೀರು ಕುಡಿದ ಕೂಡಲೇ ಮಲ ವಿಸರ್ಜನೆ ಮಾಡುವ ಅಗತ್ಯತೆ ಕಾಣಿಸುತ್ತದೆ. ಇದರಿಂದ ನಿಮ್ಮ ಕರುಳಿನ ಕ್ರಿಯೆ ನಿಯಮಿತವಾಗುತ್ತದೆ. ನೀವು ಪ್ರತೀ ಸಲ ಮಲ ವಿಸರ್ಜನೆ ಮಾಡಿದಾಗ ದೇಹವು ತ್ಯಾಜ್ಯದಿಂದ ಮುಕ್ತಿ ಪಡೆಯುತ್ತದೆ.
ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ : ಪ್ರತೀ ದಿನ ನಾವು ಆಹಾರ ಅಥವಾ ಉಸಿರಾಟದ ಮೂಲಕ ಸೇವನೆ ಮಾಡುವಂತಹ ವಿಷಕಾರಿ ಅಂಶಗಳನ್ನು ನೀರು ಹೊರಹಾಕುತ್ತದೆ. ನೀವು ನೀರು ಕುಡಿದು ಮೂತ್ರ ವಿಸರ್ಜನೆ ಮಾಡಿದಾಗ ದೇಹದಲ್ಲಿನ ವಿಷಕಾರಿ ಅಂಶ ಹೊರಹೋಗುತ್ತದೆ.
ಹಸಿವು ಹೆಚ್ಚಿಸುತ್ತದೆ : ನೀರು ಕುಡಿಯುವುದರಿಂದ ಮತ್ತು ನಿಮ್ಮ ಕರುಳನ್ನು ಸ್ವಚ್ಛಗೊಳಿಸುವುದರಿಂದ ದೇಹದ ಆಯಾಸ ಕಡಿಮೆಯಾಗುತ್ತದೆ. ಬೆಳಗ್ಗೆ ಬೇಗನೆ ಹಸಿವಾಗುತ್ತದೆ ಮತ್ತು ಇದರಿಂದ ಸರಿಯಾಗಿ ಉಪಹಾರ ಮಾಡಬಹುದು.
ತಲೆನೋವು ನಿವಾರಿಸುತ್ತದೆ :ನಿರ್ಜಲೀಕರಣದಿಂದಾಗಿ ಹೆಚ್ಚಿನ ಸಲ ನಮಗೆ ತಲೆನೋವು ಕಾಣಿಸಿಕೊಳ್ಳುತ್ತದೆ. ಬೆಳಗ್ಗೆ ನೀರು ಕುಡಿಯುವುದರಿಂದ ನಿಮ್ಮ ದೇಹವನ್ನು ನಿರ್ಜಲೀಕರಣದಿಂದ ದೂರವಿಡಬಹುದು.
ಕರುಳನ್ನು ಸ್ವಚ್ಛಗೊಳಿಸುತ್ತದೆ : ಕರುಳಿನಲ್ಲಿ ಸಂಗ್ರಹವಾಗಿರುವ ಜಿಡ್ಡನ್ನು ನೀರು ಸ್ವಚ್ಛಗೊಳಿಸುತ್ತದೆ. ಇದರಿಂದ ದೇಹವು ಪೌಷ್ಠಿಕಾಂಶಗಳನ್ನು ಬೇಗನೆ ಹೀರಿಕೊಳ್ಳಲು ನೆರವಾಗುತ್ತದೆ.
ಚಯಾಪಚಯ ಕ್ರಿಯೆಗೆ ವೇಗ :ಬಿಸಿ ನೀರನ್ನು ಕುಡಿಯುವುದರಿಂದ ನಿಮ್ಮ ಚಯಾಪಚಯ ಕ್ರಿಯೆಯು ಸುಮಾರು ಶೇ.24ರಷ್ಟು ಹೆಚ್ಚಾಗುತ್ತದೆ. ಇದರಿಂದ ನಿಮ್ಮ ಆಹಾರವು ಬೇಗನೆ ಜೀರ್ಣವಾಗಿ, ಆಹಾರ ಸಮೀಕರಿಸಿ ತೂಕ ಕಳೆದುಕೊಳ್ಳಲು ನೆರವಾಗುತ್ತದೆ.
ರಕ್ತ ಕಣಗಳ ಸೃಷ್ಟಿ :ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನಿಮ್ಮ ದೇಹವು ಕೆಂಪುರಕ್ತದ ಕಣಗಳನ್ನು ವೇಗವಾಗಿ ಉತ್ಪತ್ತಿ ಮಾಡಲು ನೆರವಾಗುತ್ತದೆ. ಇದು ಆಮ್ಲಯುಕ್ತ ರಕ್ತವಾಗಿರುವ ಕಾರಣ ನಿಮ್ಮ ಹೆಚ್ಚು ಕ್ರಿಯಾಶೀಲವಾಗಿರುವಂತೆ ಮಾಡುತ್ತದೆ.
ತೂಕ ಕಳೆದುಕೊಳ್ಳಲು :ನೀವು ತೂಕ ಕಳೆದುಕೊಳ್ಳಲು ಪ್ರಯತ್ನಿಸುತ್ತಿದ್ದರೆ ಆಗ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯಿರಿ. ಇದರಿಂದ ನೀವು ವಿಷಕಾರಿ ಟ್ರಾನ್ಸ್ ಫ್ಯಾಟ್ಸ್ ನ್ನು ಹೊರಹಾಕಲು ನೆರವಾಗುತ್ತದೆ ಮತ್ತು ದೇಹದಲ್ಲಿ ಕೊಬ್ಬಿನ ಚಯಾಪಚಯ ಕ್ರಿಯೆಯ ಮಟ್ಟ ಹೆಚ್ಚುತ್ತದೆ.
ಹೊಳೆಯುವ ತ್ವಚ್ಛೆಗೆ : ಕರುಳಿನ ಕ್ರಿಯೆ ಸರಿಯಾಗಿ ಇರದ ಸಂದರ್ಭದಲ್ಲಿ ಮೊಡವೆ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ನಿಮ್ಮ ಕರುಳಿನ ಕ್ರಿಯೆ ನಿಯಮಿತವಾಗಿದ್ದರೆ ನಿಮ್ಮ ಮುಖದಲ್ಲಿ ಮೊಡವೆಗಳು ಕಡಿಮೆಯಿರುತ್ತದೆ.
ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ : ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳಲು ನೀರು ತುಂಬಾ ಮುಖ್ಯ ಖಾಲಿ ಹೊಟ್ಟೆಯಲ್ಲಿ ನೀರು ಕುಡಿದಾಗ ಸೋಂಕಿನ ವಿರುದ್ಧ ಹೋರಾಡುವ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.
ಸಂಗ್ರಹ
Comments are closed.