ಆರೋಗ್ಯ

ಕೊರೊನಾ ಭೀತಿ: ಒಂದು ವಾರ ಕೊಲ್ಲೂರು ಮೂಕಾಂಬಿಕೆ ಕ್ಷೇತ್ರಕ್ಕೆ ಬರದಿರಲು ಕೋರಿಕೆ!

Pinterest LinkedIn Tumblr

ಕುಂದಾಪುರ: ರಾಜ್ಯಾದ್ಯಂತ ಕೊರೊನಾ ವೈರಸ್ ಭೀತಿ ಹೆಚ್ಚಿದೆ. ಇದರಿಂದ ದೇವಾಲಯಗಳಿಗೂ ಬಿಸಿ ತಟ್ಟಿದ್ದು ಭಕ್ತರ ಸಂಖ್ಯೆಯಲ್ಲಿ ಇಳಿಮುಖ ಕಂಡಿದೆ.

ಪ್ರಸಿದ್ಧ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರಕ್ಕೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಾರೆ‌. ಸದ್ಯ ಕೊರೊನಾ ಭೀತಿ ಇರುವ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ಒಂದು ವಾರಗಳ ಕಾಲ ಭಕ್ತರು ಕೊಲ್ಲೂರು ದೇವಸ್ಥಾನಕ್ಕೆ ಬರಬಾರದು ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳು ಕೋರಿದ್ದಾರೆ.

ಕೇರಳದಲ್ಲಿ ಕೊರೊನಾ ವೈರಸ್ ಹರಡಿದ ಹಿನ್ನೆಲೆ ಕೊಲ್ಲೂರಿಗೆ ಬರುವ ಭಕ್ತರ ಸಂಖ್ಯೆಯಲ್ಲಿ ಈ ಹಿಂದೆಯೇ ಇಳಿಕೆಯಾಗಿತ್ತು.

(ವರದಿ- ಯೋಗೀಶ್ ಕುಂಭಾಸಿ)

Comments are closed.