ಆರೋಗ್ಯ

ಉಡುಪಿಯಲ್ಲಿ ಮತ್ತೆ ಇಬ್ಬರಿಗೆ ಕೋವಿಡ್-19 ಕೊರೋನಾ ಸೋಂಕು ದೃಢ?

Pinterest LinkedIn Tumblr

ಉಡುಪಿ: ಕೋವಿಡ್ -19 ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಉಡುಪಿಯಲ್ಲಿ ಒಟ್ಟು ಮೂರು ಪ್ರಕರಣಗಳು ದೃಢವಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಉಡುಪಿ ಉಸ್ತುವಾರಿ ಸಚಿವರೂ ಆಗಿರುವ ಬಸವರಾಜ ಬೊಮ್ಮಾಯಿ ಅವರು ಮಾಹಿತಿ ನೀಡುತ್ತಿರುವ ವಿಡಿಯೋವೊಂದನ್ನು ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದು, ಆ ವಿಡಿಯೋದಲ್ಲಿ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಉಡುಪಿಯಲ್ಲಿ ಒಟ್ಟು ಮೂರು ಕೋವಿಡ್-19 ಪಾಸಿಟಿವ್ ಪ್ರಕರಣಗಳಿದ್ದು ಯಾರೂ ಆತಂಕ ಪಡುವ ಅವಶ್ಯಕತೆಯಿಲ್ಲ. ಸೋಂಕಿತರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಮೇಲೂ ನಿಗಾ ಇಡಲಾಗಿದೆ ಎಂದು ಬೊಮ್ಮಾಯಿ ಹೇಳಿದರು. ಈ ಬಗ್ಗೆ ಜಿಲ್ಲಾಡಳಿತ ವಾಗಲಿ ಆರೋಗ್ಯ ಇಲಾಖೆಯಾಗಲಿ ಯಾವುದೇ ಅಧಿಕೃತ ಮಾಹಿತಿ ಈವರೆಗೆ ಹೊರಹಾಕಿಲ್ಲ.

ಈ ಮೊದಲು ಕೆಲ ದಿನಗಳ ಹಿಂದೆ ಉಡುಪಿಯಲ್ಲಿ ಒಂದು ಕೋವಿಡ್ 19 ಪಾಸಿಟಿವ್ ಪ್ರಕರಣ ದೃಢವಾಗಿತ್ತು.

Comments are closed.