ಆರೋಗ್ಯ

ಉಡುಪಿ ಜಿಲ್ಲೆಯ 3ನೇ ಕೋವಿಡ್ -19 ಕೊರೋನಾ ಸೋಂಕಿತ ಆಸ್ಪತ್ರೆಯಿಂದ ಡಿಸ್ಚಾರ್ಜ್

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಪತ್ತೆಯಾಗಿದ್ದ ಕೊರೋನಾ ವೈರಸ್ ಸೋಂಕಿತರಲ್ಲಿ ಮೂರನೇ ರೋಗಿ (ಪೇಶಂಟ್ ನಂಬರ್ P-83) ಶನಿವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಮಾ. 24ರಂದು ಕೇರಳದಿಂದ ಆಗಮಿಸಿದ ಉಡುಪಿ ಮೂಲದ 29 ವರ್ಷದ ವ್ಯಕ್ತಿ ಕೊರೊನಾ ಲಕ್ಷಣ ಕಂಡ ಹಿನ್ನೆಲೆಯಲ್ಲಿ ಅವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಆ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು.

(ಸಾಂದರ್ಭಿಕ ಚಿತ್ರ)

ಉಡುಪಿಯ ಟಿ.ಎಂ.ಎ ಪೈ ಕೋವಿಡ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು. ಬಳಿಕ ಎರಡು ವರದಿಯಲ್ಲಿ ನೆಗೆಟಿವ್ ವರದಿ ಬಂದಿದ್ದು ಇಂದು ಮಧ್ಯಾಹ್ನ ಆ ವ್ಯಕ್ತಿಯನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ|ಸುಧೀರ್ ಚಂದ್ರ ಸೂಡ ಹೇಳಿದ್ದಾರೆ. ಈ ವ್ಯಕ್ತಿ ಮತ್ತೆ 14 ದಿನಗಳ ಕಾಲ ಹೋಮ್ ಕ್ವಾರೆಂಟೈನ್ ಇರಬೇಕೆಂದು ವೈದ್ಯರು ಹೇಳಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಈ ಮೊದಲು ಮಾ.18ರಂದು ದುಬೈನಿಂದ ಬಂದಿದ್ದ 34 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು ವಾರಗಳ ಹಿಂದಷ್ಟೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು ದುಬೈನಿಂದ ಬಂದಿದ್ದ ಉಡುಪಿ ಜಿಲ್ಲೆಯ ಎರಡನೇ ರೋಗಿ ಇದೇ ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು.

(ವರದಿ- ಯೋಗೀಶ್ ಕುಂಭಾಸಿ)

Comments are closed.