ಆರೋಗ್ಯ

ಉಡುಪಿ‌ ಜಿಲ್ಲೆಯಲ್ಲಿ 1 ವಾರ ಬಸ್, ಸೆಲೂನ್ ಇರಲ್ಲ; ಅಗತ್ಯ ವಸ್ತು ಖರೀದಿ ಸಮಯ ಬೆಳಿಗ್ಗೆ 7ರಿಂದ 1 ಗಂಟೆಗೆ ವಿಸ್ತರಣೆ: ಡಿಸಿ ಜಿ.ಜಗದೀಶ್

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ ದಿನಬಳಕೆ ವಸ್ತು ಖರೀದಿಗೆ ನೀಡಿರುವ ಸಮಯವನ್ನು ಬೆಳಗ್ಗೆ 7 ರಿಂದ ಮಧ್ಯಾಹ್ನ 1 ರ ವರೆಗೆ ವಿಸ್ತರಿಸಲಾಗಿದ್ದು, ಸಂಜೆ 5 ರಿಂದ 7 ರ ವರೆಗೆ ಅಂಗಡಿಗಳಲ್ಲಿ ಕೆಲಸ ಮಾಡುವ ನೌಕರರು ಮನೆಗೆ ತೆರಳಲು ಅವಕಾಶ ನೀಡಲಾಗುವುದು , ಜಿಲ್ಲೆಯೊಳಗಿನ ಬಸ್ ಸಂಚಾರವನ್ನು ಇನ್ನೂ ಒಂದು ವಾರದ ಕಾಲ ಆರಂಭಿಸುವುದಿಲ್ಲ, ಸಲೂನ್, ಸ್ಪಾ, ಗಳನ್ನೂ ಸಹ ಇನ್ನೂ ಒಂದು ವಾರ ತೆರೆಯಲು ಅವಕಾಶವಿಲ್ಲ, ರಿಕ್ಷಾಗಳಲ್ಲಿ ಒಬ್ಬ ಗ್ರಾಹಕರನ್ನು ಮಾತ್ರ ಕರೆದೊಯ್ಯಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಅವರು ಶನಿವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ , ಜಿಲ್ಲೆಗೆ ಅಂತರ್ ಜಿಲ್ಲೆ/ ರಾಜ್ಯದಿಂದ ಜನರನ್ನು ಕರೆತರುವ ಮತ್ತು ಕಳುಹಿಸಿ ಕೊಡುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಂತರ ಜಿಲ್ಲಾ ಪ್ರವಾಸಕ್ಕೆ ಅನುಮತಿ ಇಲ್ಲವಾಗಿದ್ದು, ವೈದ್ಯಕೀಯ ಕಾರಣ ಹೊರತುಪಡಿಸಿ ಇತರೆ ಕಾರಣಕ್ಕೆ ಪಾಸ್ ಗಳನ್ನು ನೀಡುವುದಿಲ್ಲ, ಪಾಸ್ ಇಲ್ಲದೇ ಅಕ್ರಮ ಪ್ರವೇಶಿಸವವರನ್ನು ಕಡ್ಡಾಯವಾಗಿ ಸರ್ಕಾರಿ ಕ್ವಾರಂಟೈನ್ ಗೆ ಒಳಪಡಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್ ಉಪಸ್ಥಿತರಿದ್ದರು.

ಜಿಲ್ಲೆಯ ಎಲ್ಲಾ ತಾಲೂಕುಗಳು ತಹಸೀಲ್ಧಾರ್ ಗಳು, ತಾ.ಪಂ ಕಾರ್ಯ ನಿರ್ವಹಣಾಧಿಕಾರಿಗಳು, ಆರೋಗ್ಯ ಇಲಾಖೆ ಮತ್ತು ಇತರೆ ಇಲಖೆಯ ಅಧಿಕರಿಗಳು ಉಪಸ್ಥಿತರಿದ್ದರು.

(ವರದಿ- ಯೋಗೀಶ್ ಕುಂಭಾಸಿ)

Comments are closed.