ಆರೋಗ್ಯ

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕೋವಿಡ್ -19 ಪರೀಕ್ಷೆ ಆರಂಭ- ಉಡುಪಿ ಜಿಲ್ಲೆಯಲ್ಲೇ ಪ್ರಥಮ

Pinterest LinkedIn Tumblr

ಉಡುಪಿ: ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಇಂದಿನಿಂದ ಕೋವಿಡ್ -19ರ ಪರೀಕ್ಷೆ ಮಂಗಳವಾರದಿಂದ ಆರಂಭಿಸಲಾಗಿದೆ. ಇದೀಗ ಈ ಪ್ರಯೋಗಾಲಯವು ಉಡುಪಿ ಜಿಲ್ಲೆಯಲ್ಲಿ ಸರಕಾರಿ ಅಥವಾ ಖಾಸಗಿ ವಲಯದಲ್ಲಿ ಕೋವಿಡ್ 19 ಪರೀಕ್ಷೆಗೆ ಅನುಮೋದನೆ ಪಡೆದ ಮೊದಲ ಆಸ್ಪತ್ರೆಯಾಗಿದೆ ಎಂದು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿಯವರು ತಿಳಿಸಿದ್ದಾರೆ.

ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)ಯಿಂದ ಕೋವಿಡ್ 19 ಪರೀಕ್ಷೆಗೆ ಅನುಮೋದನೆ ದೊರೆತಿದೆ. ಹೊಸ ಪರೀಕ್ಷಾ ಸೌಲಭ್ಯದ ಅನುಮೋದನೆಯು ಕೋವಿಡ್ 19 ಪರೀಕ್ಷೆಗಳ ಶೀಘ್ರ ವರದಿಗಳನ್ನು ಪಡೆಯಲು ಸಹಾಯ ಮಾಡುತ್ತದೆ ಎಂದಿದ್ದಾರೆ.

ಇದರಿಂದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಂದ ಸಂಗ್ರಹಿಸಿದ ಮಾದರಿಗಳನ್ನು ಪರೀಕ್ಷಿಸಲು ಸಹಾಯಕವಾಗಿದೆ. ಇದು ಮಂಗಳೂರು ಮತ್ತು ಶಿವಮೊಗ್ಗದಲ್ಲಿನ ಪರೀಕ್ಷಾ ಕೇಂದ್ರದ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ. ಪ್ರಯೋಗಾಲಯವು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ ಎಂದರು.

ಆಸ್ಪತ್ರೆಗೆ ಬರುವ ಪ್ರತೀ ರೋಗಿಗೆ ಆಧಾರ್ ಸಂಖ್ಯೆ ಕಡ್ಡಾಯ. ಅಲ್ಲದೇ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಒಬ್ಬ ಸಹಾಯಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.