ಆರೋಗ್ಯ

ಉಡುಪಿಯಲ್ಲಿ ಮತ್ತೆ ಕೊರೋನಾ ಆರ್ಭಟ: ಇಂದು 9 ಹೊಸ ಪಾಸಿಟಿವ್ ಪ್ರಕರಣ ದೃಢ

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 120 ಕ್ಕೆ ಏರಿಕೆಯಾಗಿದ್ದು, ಬುಧವಾರ ಜಿಲ್ಲೆಯಲ್ಲಿ ಮತ್ತೆ 9 ಮಂದಿಯಲ್ಲಿ ಕೊರೋನಾ ವೈರಸ್ ಪಾಸಿಟಿವ್ ದೃಢವಾಗಿದೆ.

ಮಹಾರಾಷ್ಟ್ರದಿಂದ ಉಡುಪಿ ಜಿಲ್ಲೆಗೆ ಬಂದು ಕ್ವಾರೆಂಟೈನ್ ಆಗಿದ್ದ 41, 27, 30,32,34,25 ವರ್ಷದ ಪುರುಷರು, 31 ಮತ್ತು 17 ವರ್ಷದ ಮಹಿಳೆಗೆ ಹಾಗೂ 9 ವರ್ಷದ ಗಂಡು ಮಗುವಿನಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ.

ಪಾಸಿಟಿವ್ ಬಂದ ಎಲ್ಲರನ್ನೂ ಸದ್ಯ ನಿಗದಿತ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

Comments are closed.