ಆರೋಗ್ಯ

ಇಬ್ಬರಿಗೆ ಕೋವಿಡ್ ಸೋಂಕು ಪತ್ತೆ; ಕೋಟದ ಬಾರಿಕೆರೆ, ವಂಡಾರು ಮಾರ್ವಿಯಲ್ಲಿ ಸೀಲ್ ಡೌನ್

Pinterest LinkedIn Tumblr

ಕುಂದಾಪುರ: ಕ್ವಾರಂಟೈನ್ ಮುಗಿಸಿದ ಬಳಿಕ ಸರಕಾರದ ಆದೇಶದ ಹಿನ್ನೆಲೆ ಮನೆಗೆ ಬಂದ ಕೋಟ ಬಾರಿಕೆರೆಯ ಮಹಿಳೆಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ಉಡುಪಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಂಡಾರು ಗ್ರಾಮದ ಮಾರ್ವಿಯಲ್ಲಿ ಪೂನದಿಂದ ಆಗಮಿಸಿದ ಒಂದೂವರೇ ವರ್ಷದ ಮಗುವಿನ ವರದಿಯು ಪಾಸಿಟಿವ್ ಬಂದಿದ್ದು ಇದೀಗ ಕೋಟತಟ್ಟು ಗ್ರಾ.ಪಂ. ವ್ಯಾಪ್ತಿಯ ಬಾರಿಕೆರೆಯ 100 ವ್ಯಾಪ್ತಿಯ 12 ಮನೆ ಮತ್ತು ವಂಡಾರು ಮಾರ್ವಿಯನ್ನು ಸೀಲ್ ಡೌನ್ ಮಾಡಲಾಗಿದೆ.

ಪೂನಾ ದಿಂದ ಆಗಮಿಸಿದ ಬಾರಿಕೆರೆಯ ಮಹಿಳೆ 14 ದಿನದಿಂದ ಕುಂದಾಪುರದಲ್ಲಿ ಕ್ವಾರಂಟೈನ್ ನಲ್ಲಿದ್ದು ರಿಪೋರ್ಟ್ ಲಭ್ಯವಾಗುವ ಮುನ್ನವೇ ಮೇ 28 ರಂದು ಸಂಜೆ ಮನೆಗೆ ಬಂದಿದ್ದು ಮೇ 29ರಂದು ಪಾಸಿಟಿವ್ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಬ್ರಹ್ಮಾವರ ತಹಶಿಲ್ದಾರ್ ಕಿರಣ್‌ಗೋರಯ್ಯ, ಕೋಟ ಠಾಣಾಧಿಕಾರಿ ರಾಜಶೇಖರ್ ಮಂದಲ್ಲಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು, ಆರೋಗ್ಯ ಇಲಾಖೆಯವರು ಭೇಟಿ ನೀಡಿದ್ದಾರೆ

Comments are closed.