ಆರೋಗ್ಯ

ಉಡುಪಿಯಲ್ಲಿ ಶುಕ್ರವಾರ ಮತ್ತೆ ಕೊರೋನಾ ಮಹಾ ಆಘಾತ: ಇಂದು 204 ಜನರಿಗೆ ಸೋಂಕು ದೃಢ

Pinterest LinkedIn Tumblr

ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕೋವಿಡ್-19 ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಸೋಂಕಿತರ ಸಂಖ್ಯೆ ಇಂದು ಕೂಡ ಹೆಚ್ಚಿದೆ. ಶುಕ್ರವಾರ ಮತ್ತೆ 204 ಜನರಿಗೆ ಕೋವಿಡ್-19 ಸೋಂಕು ತಾಗಿರುವುದು ಪರೀಕ್ಷೆಯಲ್ಲಿ ದೃಢವಾಗಿದೆ.

ಮಹಾರಾಷ್ಟ್ರದಿಂದ ಜಿಲ್ಲೆಗೆ ಹೆಚ್ಚಿನ ಪ್ರಮಾಣದಲ್ಲಿ ಜನರು ಜಿಲ್ಲೆಗೆ ಬಂದಿದ್ದರು. ಇವರ ಗಂಟಲು ದ್ರವ ಪರೀಕ್ಷೆ ವರದಿ ಬರುತ್ತಿದೆ. ಹೆಚ್ಚು ಪರೀಕ್ಷೆ ನಡೆಯುತ್ತಿರುವ ಕಾರಣ ಸೋಂಕಿತರ ಸಂಖ್ಯೆಯೂ ಹೆಚ್ಚಿನ ಪ್ರಮಾಣದಲ್ಲಿದೆ. ಜಿಲ್ಲೆಯ ಇಂದಿನ ಎಲ್ಲಾ ಪ್ರಕರಣಗಳು ಕೂಡಾ ಮಹಾರಾಷ್ಟ್ರದಿಂದ ಬಂದವರಲ್ಲಿಯೇ ಕಂಡು ಬಂದಿದೆ.

ಜಿಲ್ಲೆಯಲ್ಲಿ ಗುರುವಾರ 92 ಹೊಸ ಸೋಂಕು ಪ್ರಕರಣಗಳು ದೃಢವಾಗಿತ್ತು. ಇಂದು ಮತ್ತೆ 204 ಹೊಸ ಸೋಂಕು ಪ್ರಕರಣಗಳು ದೃಢವಾಗಿದ್ದು, ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 768 ಕ್ಕೆ ಏರಿಕೆ ಕಂಡಿದೆ. ಇದುವರೆಗೆ ಒಟ್ಟು 82 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಓರ್ವ ಸೋಂಕಿತ ಸಾವನ್ನಪ್ಪಿದ್ದಾರೆ.

Comments are closed.