ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ 45 ಮಂದಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರಿಂದ ಜಿಲ್ಲೆಯ ಕೋವಿಡ್-19 ಸೋಂಕಿತರ ಸಂಖ್ಯೆ 947ಕ್ಕೆ ಏರಿಕೆಯಾಗಿದೆ. ಕಳೆದೆರಡು ವಾರದಿಂದ ಉಡುಪಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ ಹೆಚ್ಚುತ್ತಲೇ ಇದೆ.
ಮಹಾರಾಷ್ಟ್ರ ಸೇರಿದಂತೆ ಅನ್ಯರಾಜ್ಯಗಳಿಂದ ಬಂದು ಕ್ವಾರಂಟೈನ್ ನಲ್ಲಿದ್ದ ಜನರಿಗೆ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಉಡುಪಿ ಜಿಲ್ಲೆಗೆ ಎಂಟು ಸಾವಿರಕ್ಕೂ ಹೆಚ್ಚು ಮಂದಿ ಮಹಾರಾಷ್ಟ್ರದಿಂದ ಆಗಮಿಸಿದ್ದರು. ಇವರಲ್ಲಿ ಬಹುತೇಕ ಗಂಟಲು ದ್ರವ ಪರೀಕ್ಷೆ ವರದಿ ಜಿಲ್ಲಾಡಳಿತದ ಕೈ ಸೇರಿದೆ.
ಜಿಲ್ಲೆಯ ಇಂದಿನ ಎಲ್ಲಾ 45 ಪ್ರಕರಣಗಳು ಕೂಡಾ ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದವರಾಗಿದ್ಧಾರೆ. ಒಂದು ವರ್ಷದ ಹೆಣ್ಣು ಮಗು ಸೇರಿದಂತೆ ಮೂವರು ಮಕ್ಕಳಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.
Comments are closed.