ಆರೋಗ್ಯ

ಮಹಾರಾಷ್ಟ್ರದಿಂದ ಬಂದವರಿಗೆ 14 ದಿನ ಹೋಮ್ ಕ್ವಾರಂಟೈನ್: ಮನೆ ಸೀಲ್ ಡೌನ್, ಹೊರ ಬಂದ್ರೆ ಕೇಸ್- ಶ್ರೀರಾಮುಲು

Pinterest LinkedIn Tumblr

ಉಡುಪಿ: ಮಹಾರಾಷ್ಟ್ರದಿಂದ ಬಂದವರನ್ನು ಇನ್ನು ಮುಂದೆ 14 ದಿನಗಳ ಹೋಂ ಕ್ವಾರಂಟೈನ್ ಮಾಡಿ ವ್ಯಕ್ತಿ ವಾಸವಾಗಿರುವ ಮನೆಯನ್ನು ಸೀಲ್ ಡೌನ್ ಮಾಡಲಾಗುವುದು ಒಂದು ವೇಳೆ ಕ್ವಾರಂಟೈನ್ ನಲ್ಲಿರುವ ವ್ಯಕ್ತಿ ಮನೆಯಿಂದ ಹೊರಗಡೆ ಬಂದರೆ ಅಂತವರ ಮೇಲೆ ಕ್ರಮ ಜರುಗಿಸುವ ನಿರ್ಧಾರವನ್ನು ಸರಕಾರ ಮಾಡಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಆರೋಗ್ಯ ಸಚಿವರು ಮಂಗಳವಾರ ಉಡುಪಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡುತ್ತಾ ಇನ್ನು ಮುಂದೆ ಮಹಾರಾಷ್ಟ್ರದಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಮಾಡುವ ಬದಲು ಹೋಮ್ ಕ್ವಾರಂಟೈನ್ ಮಾಡಲು ರಾಜ್ಯ ಸರಕಾರ ಹೊಸ ಕ್ರಮಗಳನ್ನು ಕೈಗೊಂಡಿದೆ. ಮಹಾರಾಷ್ಟ್ರದಿಂದ ಬಂದವರನ್ನು ಸೀಲ್ ಹಾಕಿಸಿ ಹೋಮ್ ಕ್ವಾರಂಟೈನ್ ಮಾಡಿ ಮನೆಯನ್ನು ಸೀಲ್ ಡೌನ್ ಮಾಡಲಾಗುತ್ತದೆ. ಕ್ವಾರೆಂಟೈನ್ ಮೀರಿ ಒಂದು ವೇಳೆ ಈ ಸಂದರ್ಭದಲ್ಲಿ ಮನೆಯಿಂದ ಹೊರಬಂದರೆ ಅಂತ ವ್ಯಕ್ತಿಯ ಮೇಲೆ ಕೇಸ್ ಹಾಕುವ ನಿರ್ಧಾರವನ್ನು ಸರಕಾರ ಮಾಡಿದೆ ಎಂದು ತಿಳಿಸಿದರು.

Comments are closed.