ಆರೋಗ್ಯ

ಉಡುಪಿ ಜಿಲ್ಲೆಯಲ್ಲಿ ಭಾನುವಾರ 21 ಕೊರೋನಾ ಪಾಸಿಟಿವ್ ಪತ್ತೆ; ಸೋಂಕಿತರ ಸಂಖ್ಯೆ 1026 ಕ್ಕೆ ಏರಿಕೆ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಭಾನುವಾರ ಮತ್ತೆ 21 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1026ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಸಂಖ್ಯೆಯಲ್ಲಿ ಜಿಲ್ಲೆ ಶನಿವಾರ ಸಾವಿರ ಗಡಿ ದಾಟಿತ್ತು. ಶನಿವಾರ ಜಿಲ್ಲೆಯಲ್ಲಿ 14 ಜನರಿಗೆ ಕೊರೋನಾ ಸೋಂಕು ದೃಢವಾಗಿ, ಒಟ್ಟು ಸೋಂಕಿತರ ಸಂಖ್ಯೆ 1005ಕ್ಕೆ ಏರಿಕೆಯಾಗಿತ್ತು. ಜಿಲ್ಲೆಯಲ್ಲಿ ಇಂದು 130 ಜನರು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಇದುವರೆಗೆ ಒಟ್ಟು 713 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ. ಜಿಲ್ಲೆಯಲ್ಲಿ ಸದ್ಯ 312 ಸಕ್ರಿಯ ಪ್ರಕರಣಗಳಿವೆ.

ಇಂದಿನ ಸೋಂಕಿತರ ಪೈಕಿ ಓರ್ವ ಮಹಿಳೆ ತಮಿಳುನಾಡು ರಾಜ್ಯದಿಂದ ಬಂದವರಾಗಿದ್ದರೆ, ಓರ್ವ ಉತ್ತರ ಪ್ರದೇಶದಿಂದ ಬಂದವರು ಮತ್ತೊಬ್ಬರ ಸೋಂಕು ಸಂಪರ್ಕದ ಬಗ್ಗೆ ಪತ್ತೆ ಹಚ್ಚಲಾಗುತ್ತಿದೆ. ಉಳಿದ 18 ಮಂದಿ ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದವರಾಗಿದ್ದಾರೆ ಎಂದು ತಿಳಿದುಬಂದಿದೆ.

Comments are closed.