ಆರೋಗ್ಯ

ಉಡುಪಿ ಜಿಲ್ಲೆಯಲ್ಲಿ‌ ಸೋಮವಾರ ಇಬ್ಬರಿಗೆ ಕೊರೋನಾ ಪಾಸಿಟಿವ್ ಪ್ರಕರಣ ದೃಢ: ಇಂದು 23 ಮಂದಿ ಡಿಶ್ಚಾರ್ಜ್

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ 2 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1028ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಸಂಖ್ಯೆಯಲ್ಲಿ ಜಿಲ್ಲೆ ಶನಿವಾರ ಸಾವಿರ ಗಡಿ ದಾಟಿತ್ತು. ಭಾನುವಾರ ಜಿಲ್ಲೆಯಲ್ಲಿ 21 ಜನರಿಗೆ ಕೊರೋನಾ ಸೋಂಕು ದೃಢವಾಗಿ, ಒಟ್ಟು ಸೋಂಕಿತರ ಸಂಖ್ಯೆ 1026ಕ್ಕೆ ಏರಿಕೆಯಾಗಿತ್ತು. ಜಿಲ್ಲೆಯಲ್ಲಿ ಇಂದು 23 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಇದುವರೆಗೆ ಒಟ್ಟು 736 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ. ಜಿಲ್ಲೆಯಲ್ಲಿ ಸದ್ಯ 291 ಸಕ್ರಿಯ ಪ್ರಕರಣಗಳಿವೆ.

Comments are closed.