ಆರೋಗ್ಯ

ಮಂಗಳವಾರವೂ ಉಡುಪಿಯಲ್ಲಿ ಮುಂದುವರಿದ ಕೊರೋನಾ ಆಘಾತ: 11 ಮಂದಿಗೆ ಪಾಸಿಟಿವ್

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 11 ಜನರಿಗೆ ಕೋವಿಡ್ ಸೋಂಕು ದೃಢವಾಗಿದ್ದು ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1088ಕ್ಕೆ ಏರಿಕೆಯಾಗಿದೆ.  ಜಿಲ್ಲೆಯಲ್ಲಿ ಇದುವರೆಗೆ 969 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದು, ಸದ್ಯ ಜಿಲ್ಲೆಯಲ್ಲಿ 117 ಸಕ್ರಿಯ ಸೋಂಕು ಪ್ರಕರಣಗಳಿವೆ.

ಸೋಮವಾರವೂ ಬೈಂದೂರು ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಶಿರೂರು ಸರಕಾರಿ ಆಸ್ಪತ್ರೆ ಸಿಬ್ಬಂದಿ ಸಹಿತ ಹದಿನಾಲ್ಕು ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು.

Comments are closed.