ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರದಂದು 14 ಮಂದಿಯಲ್ಲಿ ಕೋವಿಡ್ 19 ಸೋಂಕು ದೃಢ ಪಟ್ಟಿದ್ದು ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1102ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಮಂಗಳವಾರ ಮಹಿಳಾ ಪೊಲೀಸ್ ಸಿಬಂದಿ ಸಹಿತ 11 ಜನರಿಗೆ ಕೋವಿಡ್ 19 ಸೋಂಕು ಪಾಸಿಟಿವ್ ವರದಿಯಾಗಿತ್ತು.
ಬುಧವಾರ ಜಿಲ್ಲೆಯಲ್ಲಿ ಒಟ್ಟು 9 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ, ಒಟ್ಟು 122 ಪ್ರಕರಣಗಳು ಸಕ್ರಿಯವಾಗಿದ್ದು ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 978 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
Comments are closed.