ಆರೋಗ್ಯ

ಸೋಮವಾರವೂ ಉಡುಪಿ ಜಿಲ್ಲೆಯಲ್ಲಿ ಕೊರೋನಾರ್ಭಟ: 18 ಮಂದಿಗೆ ಸೋಂಕು‌ ದೃಢ

Pinterest LinkedIn Tumblr

ಉಡುಪಿ: ಉಡುಪಿಯಲ್ಲಿ ಕೋವಿಡ್-19 ಸೋಂಕಿನ ಆರ್ಭಟ ಮುಂದುವರಿದಿದೆ. ಇಂದು ಜಿಲ್ಲೆಯಲ್ಲಿ ಮತ್ತೆ 18 ಜನರಿಗೆ ಕೋವಿಡ್ ಸೋಂಕು ದೃಢವಾಗಿದ್ದು, ಜಿಲ್ಲೆಯ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 1197 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಭಾನುವಾರ 40 ಜನರಿಗೆ ಕೋವಿಡ್-19 ಸೋಂಕು ದೃಢವಾಗಿತ್ತು. ಇಂದು 18 ಜನರಿಗೆ ಸೋಂಕು ತಗುಲಿದೆ.

ಜಿಲ್ಲೆಯಲ್ಲಿ ಒಟ್ಟು 1197 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, ಅದರಲ್ಲಿ 1056 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಸದ್ಯ ಜಿಲ್ಲೆಯಲ್ಲಿ 139 ಸಕ್ರಿಯ ಪ್ರಕರಣಗಳಿದ್ದು, ಅವರೆಲ್ಲರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Comments are closed.