ಕುಂದಾಪುರ: ನಗರದಲ್ಲಿನ ಹತ್ತನೆ ತರಗತಿ ಪರೀಕ್ಷಾ ಕೇಂದ್ರವೊಂದರಲ್ಲಿ ಸೋಮವಾರ ವಿಜ್ಞಾನ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್ ಇರುವುದು ದೃಢವಾಗಿದೆ.
ಕುಂದಾಪುರದ ಪರೀಕ್ಷಾ ಕೇಂದ್ರವೊಂದರಲ್ಲಿ ಮೊದಲಿಗೆ ಇಂಗ್ಲೀಷ್, ಶನಿವಾರ ಗಣಿತ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಸೋಮವಾರ ವಿಜ್ಞಾನ ಪರೀಕ್ಷೆಗೆ ಹಾಜರಾಗಿದ್ದಳು. ಥರ್ಮಲ್ ಸ್ಕ್ರೀನಿಂಗ್ ಮಾಡಿದ್ದು ಅದರಲ್ಲಿ ಯಾವುದೇ ಲಕ್ಷಣಗಳು ಕಂಡುಬಂದಿರದ ಹಿನ್ನೆಲೆ ಆಕೆಗೆ ಪರೀಕ್ಷೆ ಬರೆಯಲು ಅನುವು ಮಾಡಲಾಗಿತ್ತು. ಆದರೆ ವಿದ್ಯಾರ್ಥಿನಿಗೆ ತಲೆನೋವು ಸೇರಿದಂತೆ ಅನಾರೋಗ್ಯವಿರುವ ಬಗ್ಗೆ ಕೆಲವು ಗಂಟೆಗಳ ಬಳಿಕ ಆಕೆ ಹೇಳಿದ್ದು ಬಳಿಕ ಆಕೆಯನ್ನು ಪ್ರತ್ಯೇಕ ಕೊಠಡಿಯಲ್ಲಿ ಕುಳ್ಳೀರಿಸಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗಿತ್ತು.ಆದರೆ ಆಕೆಗೆ ಅನಾರೋಗ್ಯ ಉಲ್ಬಣಗೊಂಡ ಹಿನ್ನೆಲೆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿ ಕೋವಿಡ್-19 ಪರೀಕ್ಷೆ ನಡೆಸಲಾಗಿತ್ತು. ಮಂಗಳವಾರ ಗಂಟಲು ದ್ರವ ಪರೀಕ್ಷಾ ವರದಿ ಕೈಸೇರಿದ್ದು ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಮಹಾರಾಷ್ಟ್ರದಿಂದ ಬಂದು ಕ್ವಾರೆಂಟೈನ್ ಮುಗಿಸಿದವರು ವಿದ್ಯಾರ್ಥಿನಿ ಮನೆಗೆ ಬಂದಿದ್ದರೆನ್ನಲಾಗುತ್ತಿದ್ದು ವಿದ್ಯಾರ್ಥಿನಿಗೆ ಹೇಗೆ ಕೊರೋನಾ ಸೋಂಕು ತಗಲಿದೆ ಎನ್ನುವುದು ಇನ್ನಷ್ಟೆ ತಿಳಿಯಬೇಕಿದೆ.
ವಿದ್ಯಾರ್ಥಿನಿ ಪರೀಕ್ಷೆ ಬರೆದ ಕೊಠಡಿ ಸೀಲ್ ಡೌನ್ ಮಾಡಲಾಗುತ್ತದೆ. ಯಾವುದೇ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕ ಪಡಬೇಕಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Comments are closed.