ಆರೋಗ್ಯ

ಉಡುಪಿ ಜಿಲ್ಲೆಯಲ್ಲಿ ಮೂರನೇ ಬಲಿ‌ ಪಡೆದ ಕೊರೋನಾ: ಬೈಂದೂರು ತಾಲೂಕಿನ ವ್ಯಕ್ತಿ ಸಾವು

Pinterest LinkedIn Tumblr

ಉಡುಪಿ: ಮಹಾಮಾರಿ ಕೊರೋನಾ ಆರ್ಭಟ ಕರಾವಳಿ ಜಿಲ್ಲೆ ಉಡುಪಿಯಲ್ಲಿ ನಿತ್ಯವೂ ಹೆಚ್ಚುತ್ತಲೇ ಇದ್ದು ಜಿಲ್ಲೆಯಲ್ಲಿ ಕೊರೋನಾ ಮೂರನೇ ಬಲಿ‌ ಪಡೆದಿದೆ. ಮಹಾರಾಷ್ಟ್ರದಿಂದ ಶನಿವಾರದಂದು ಪತ್ನಿ, ಪುತ್ರಿ ಜೊತೆಗೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮಪಂಚಾಯತ್ ವ್ಯಾಪ್ತಿಯ ಗ್ರಾಮವೊಂದಕ್ಕೆ ಬಂದಿದ್ದ 48 ವರ್ಷ ಪ್ರಾಯದ ವ್ಯಕ್ತಿ ಭಾನುವಾರ ಮೃತಪಟ್ಟಿದ್ದರು.

ಮೊದಲೇ ವಿಪರೀತ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಸಾವಿನ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ತಿಳಿಸಲಾಗಿತ್ತು. ಆ ಮನೆಗೆ ಅಗತ್ಯ ಎಚ್ಚರಿಕಾ ಕ್ರಮಗಳೊಂದಿಗೆ ದೌಡಾಯಿಸಿದ ಆರೋಗ್ಯ ಇಲಾಖೆಯವರು ಮೃತ ವ್ಯಕ್ತಿಯ ಗಂಟಲು ದ್ರವ ಮಾದರಿ ಸಂಗ್ರಹ ಮಾಡುವ ಪ್ರಕ್ರಿಯೆ ನಡೆಸಿದ್ದಾರೆ. ಕೋವಿಡ್-19 ಪರೀಕ್ಷೆ ವರದಿ ಸದ್ಯ ಜಿಲ್ಲಾಡಳಿತದ ಕೈ ಸೇರಿದ್ದು ವ್ಯಕ್ತಿಗೆ ಕೊರೋನಾ ಪಾಸಿಟಿವ್ ಇರುವುದು ದೃಢವಾಗಿದೆ.

ಕೋವಿಡ್ ಶಿಷ್ಟಾಚಾರದಂತೆಯೇ ಮೃತ ವ್ಯಕ್ತಿಯ ಅಂತ್ಯಕ್ರಿಯೆಯನ್ನು ನಡೆಸಲಾಗಿದೆ. ಅಲ್ಲದೆ ಮೃತನ ಸಂಪರ್ಕದಲ್ಲಿದ್ದ ಪತ್ನಿ ಹಾಗೂ ಪುತ್ರಿ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ.

Comments are closed.