ಆರೋಗ್ಯ

ಉಡುಪಿ ಜಿಲ್ಲೆಯಲ್ಲಿ ಮುಂದುವರಿದ ಕೊರೋನಾ ಕಾಟ: ಗುರುವಾರ 14 ಮಂದಿಗೆ ಪಾಸಿಟಿವ್

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ನಿತ್ಯವೂ ಹೆಚ್ಚಾಗುತ್ತಿದ್ದು ಗುರುವಾರ ಉಡುಪಿಯಲ್ಲಿ 14 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಜಿಲ್ಲೆಯಾದ್ಯಂತ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡುಬರುತ್ತಿದೆ. ಇಂದಿನ ಹದಿನಾಲ್ಕು ಹೊಸ ಪ್ರಕರಣಗಳು ದಾಖಲಾಗಿದ್ದು ಇದರಿಂದ ಜಿಲ್ಲೆಯ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 1220ಕ್ಕೆ ಏರಿಕೆಯಾಗಿದೆ.

ಬುಧವಾರ ಜಿಲ್ಲೆಯಲ್ಲಿ ಒಂಬತ್ತು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈವರೆಗೆ ಜಿಲ್ಲೆಯಲ್ಲಿ ಮೂರು ಮಂದಿ ಸಾವನ್ನಪ್ಪಿದ್ದಾರೆ.

Comments are closed.