ಆರೋಗ್ಯ

ಉಡುಪಿ ಜಿಲ್ಲೆಯಲ್ಲಿ ಕೊರೋನಾಕ್ಕೆ ಮತ್ತೊಂದು ಬಲಿ: ಬೈಂದೂರು ಮೂಲದ 70 ವರ್ಷದ ವ್ಯಕ್ತಿ ಸಾವು

Pinterest LinkedIn Tumblr

ಉಡುಪಿ: ಕಳೆದ 15 ದಿನಗಳ ಹಿಂದೆ ಕೊರೋನ ಪಾಸಿಟಿವ್ ಬಂದು ಡಾ.ಟಿಎಂಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೈಂದೂರಿನ 70 ವರ್ಷದ ವೃದ್ಧರೊಬ್ಬರು ಸೋಮವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ಕೊರೋನದಿಂದ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ಕೆಲ ದಿನಗಳಿಂದ ವೆಂಟಿಲೇಟರ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಹಲವು ಸಮಸ್ಯೆಗಳಿಂದ ಅವರು ಬಳಲುತ್ತಿದ್ದರು ಎನ್ನಲಾಗಿದೆ. ಕೊಂಚ ಚೇತರಿಸಿಕೊಂಡ ಅವರನ್ನು ಬಳಿಕ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು.

ಆದರೆ ಇಂದು ಅವರು ಮೃತಪಟ್ಟಿದ್ದಾರೆ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

Comments are closed.