ಆರೋಗ್ಯ

ಉಡುಪಿ ಜಿಲ್ಲೆ ಲಾಕ್‌ಡೌನ್ ಸದ್ಯಕ್ಕೆ ಅವಶ್ಯಕತೆಯಿಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ (Video)

Pinterest LinkedIn Tumblr

ಕುಂದಾಪುರ: ಆಯಾಯ ಜಿಲ್ಲೆಯಲ್ಲಿ ಲಾಕ್ ಡೌನ್ ಅಗತ್ಯತೆ ಬಗ್ಗೆ ಶಾಸಕರು, ಜನಪ್ರತಿನಿಧಿಗಳ ಜೊತೆ ಮಾತನಾಡಿ ಕ್ರಮಕೈಗೊಳ್ಳಲು ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ತಿಳಿಸಿದ್ದಾರೆ. ಅಂತೆಯೇ ಜಿಲ್ಲೆಯ ಪರಿಸ್ಥಿತಿಗಳ ಬಗ್ಗೆ ಆರೋಗ್ಯ ಇಲಾಖೆಯವರ ಅಭಿಪ್ರಾಯ ಪಡೆದು ಲಾಕ್‌ಡೌನ್ ಬಗ್ಗೆ ಕ್ರಮಕೈಗೊಳ್ಳುತ್ತೇವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕುಂದಾಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಂಗಳೂರು ಜಿಲ್ಲೆಯಲ್ಲಿ ಲಾಕ್ ಡೌನ್ ಅನಿವಾರ್ಯವಾದ್ದರಿಂದ ವಾರಗಳ ಕಾಲ ಲಾಕ್ ಡೌನ್ ಮಾಡಲಾಗುತ್ತೆ. ಉಡುಪಿ ಜಿಲ್ಲೆಯ ಮಟ್ಟಿಗೆ ಸದ್ಯಕ್ಕೆ ಲಾಕ್ ಡೌನ್ ಅಗತ್ಯವಿಲ್ಲ ಅನ್ನಿಸುತ್ತದೆ. ಉಡುಪಿ ಮಂಗಳೂರು ಗಡಿಯನ್ನು ಮುಚ್ಚುವ ಅಥವಾ ತೆರೆಯುವ ಬಗ್ಗೆ ಮುಂದಿನ ದಿನದಲ್ಲಿ ಕ್ರಮಕೈಗೊಳ್ಳಲಾಗುತ್ತದೆ ಎಂದು ಕೋಟ ತಿಳಿಸಿದ್ದಾರೆ.

Comments are closed.