ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕೋವಿಡ್-19 ಸೋಂಕಿತರ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಜಿಲ್ಲೆಯಲ್ಲಿ ಇಂದು 53 ಜನರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದ್ದು, ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1786ಕ್ಕೆ ಏರಿಕೆಯಾಗಿದೆ.
ಜಿಲ್ಲಾಸ್ಪತ್ರೆಯ ಇಬ್ಬರು ವೈದ್ಯರಿಗೆ ಸೋಂಕು ದೃಢವಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಕೋವಿಡ್ ಲಕ್ಷಣವಿಲ್ಲದ ಸೋಂಕಿತರ ಸಂಪರ್ಕದಿಂದ ಇವರಿಗೆ ಸೋಂಕು ತಾಗಿರಬಹುದು ಎಂದು ಅಂದಾಜಿಸಲಾಗಿದೆ. ಒಬ್ಬರು ವೈದ್ಯರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮತ್ತೊಬ್ಬರು ಮನೆಯಲ್ಲಿಯೇ ಚಿಕಿತ್ಸೆ ಮುಂದುವರಿಸಿದ್ದಾರೆ.
ಜಿಲ್ಲಾಸ್ಪತ್ರೆಯ ನಾಲ್ವರು ಸಿಬ್ಬಂದಿಗಳಿಗೆ ಕೋವಿಡ್-19 ಸೋಂಕಿರುವುದು ಪತ್ತೆಯಾಗಿದೆ. ಇವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಇವರ ಸಂಪರ್ಕಕ್ಕೆ ಬಂದ ಇತರ ಸಿಬ್ಬಂದಿಗಳ ಗಂಟಲು ದ್ರವ ಪರೀಕ್ಷಾ ಮಾದರಿ ಕಳುಹಿಸಿಕೊಡಲಾಗಿದೆ ಎನ್ನಲಾಗಿದೆ.
Comments are closed.