ಕುಂದಾಪುರ: ಬೈಂದೂರು ಪೊಲೀಸ್ ಠಾಣೆಯ ಎ.ಎಸ್.ಐ ಸಹಿತ ಮೂವರು ಸಿಬ್ಬಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಬೈಂದೂರು ಪೊಲೀಸ್ ಠಾಣೆಯನ್ನು ಎರಡನೇ ಬಾರಿ ಸೀಲ್ ಡೌನ್ ಮಾಡಲಾಗಿದೆ.

ಕೊರೋನ ದೃಢಪಟ್ಟ ಎಎಸ್ಐ, ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್, ಓರ್ವ ಹೋಂ ಗಾರ್ಡ್ ಸೇರಿ ಮೂವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಠಾಣೆಯನ್ನು ಎರಡು ದಿನಗಳ ಕಾಲ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇದಕ್ಕೂ ಮೊದಲು ಕೆಲ ತಿಂಗಳ ಹಿಂದೆ ಸಿಬ್ಬಂದಿಯೊಬ್ಬರಿಗೆ ಕೊರೋನ ಸೋಂಕು ದೃಢಪಟ್ಟಿತ್ತು. ಬಳಿಕ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿತ್ತು. ಎಸ್ಐ ಸಹಿತ ಹಲವರು ಕ್ವಾರಂಟೈನ್ಗೆ ಒಳಗಾಗಿದ್ದರು.
Comments are closed.