ಆರೋಗ್ಯ

ಉಡುಪಿ ಜಿಲ್ಲೆಯಲ್ಲಿ ಕೋರೋನಾ ಸೋಂಕಿಗೆ 6 ನೇ ಬಲಿ

Pinterest LinkedIn Tumblr

ಉಡುಪಿ: ಮಹಾಮಾರಿ ಕೊರೋನಾ ಉಡುಪಿ ಜಿಲ್ಲೆಯಲ್ಲಿ ಗುರುವಾರ ಮತ್ತೋರ್ವ ವ್ಯಕ್ತಿಯನ್ನು ಬಲಿ ಪಡೆದಿದದ್ದು ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಮೃತರಾದವರ ಸಂಖ್ಯೆ 6 ಕ್ಕೆ ಏರಿಕೆ ಆಗಿದೆ.

ಡಯಾಬಿಟಿಸ್ ಹಾಗೂ ತೀವೃ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಉಡುಪಿ ನಗರದ 49 ವರ್ಷ ಪ್ರಾಯದ ವ್ಯಕ್ತಿಯೋರ್ವರು ಮೊದಲಿಗೆ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆ ವ್ಯಕ್ತಿಯಲ್ಲಿ ಕೋವಿಡ್-19 ಲಕ್ಷಣ ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ರಾತ್ರಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು ತಕ್ಷಣ ವ್ಯಕ್ತಿಯನ್ನು ಕೋವಿಡ್ ಆಸ್ಪತ್ರೆಯಾದ ಟಿ.ಎಮ್.ಎ.ಪೈ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಗುರುವಾರ ಚಿಕಿತ್ಸೆ ಫಲಕಾರಿಯಾಗದೆ ಆ ವ್ಯಕ್ತಿ ಮೃತಪಟ್ಟಿದ್ದಾರೆ.

Comments are closed.