ಉಡುಪಿ: ಜಿಲ್ಲಾಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ನಾಲ್ವರು ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲಾಸ್ಪತ್ರೆಯನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಡಿದೆ.
ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿದ್ದು ಜಿಲ್ಲಾ ಆಸ್ಪತ್ರೆಯ ವ್ಯದ್ಯರಿಗೂ ಸೋಂಕು ದೃಢಪಟ್ಟಿರುವ ನಿಟ್ಟಿನಲ್ಲಿ ಮೂರು ದಿನಗಳ ತುರ್ತು ಸೇವೆ, ಫೀವರ್ ಕ್ಲಿನಿಕ್ ಹೊರತುಪಡಿಸಿ ಉಳಿದೆಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಕೇವಲ ತುರ್ತು ಚಿಕಿತ್ಸೆ, ಐಸೋಲೇಷನ್ ವಿಭಾಗ ಹಾಗೂ ಫೀವರ್ ಕ್ಲಿನಿಕ್ ಗಳು ಮಾತ್ರ ಕಾರ್ಯಾಚರಿಸಲಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸ್ಯಾನಿಟೈಸ್ ಮಾಡಲಾಗುವುದು ಎಂದು ಜಿಲ್ಲಾ ಸರ್ಜನ್ ತಿಳಿಸಿದ್ದಾರೆ.ಬುಧವಾರ ಆಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ನಾಲ್ವರು ಸಿಬ್ಬಂದಿಗಳಲ್ಲಿ ಕೋವಿಡ್ ಸೋಂಕು ದೃಢ ಪಟ್ಟಿದ್ದು ಆದುದರಿಂದ ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಆಸ್ಪತ್ರೆಯನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುವುದು ಜೊತೆಗೆ ಆಸ್ಪತ್ರೆಯಲ್ಲಿ ಹೊರರೋಗಿಗಳ ವಿಭಾಗವನ್ನು ಮೂರು ದಿನಗಳ ಕಾಲ ಬಂದ್ ಮಾಡಲಾಗಿದೆ.
Comments are closed.