ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ 2 ವಾರಗಳ ಕಾಲ ಸಾರ್ವಜನಿಕ ಸಾರಿಗೆ ಸಂಪರ್ಕ ಸೇವೆ ಇರುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟನೆ ನೀಡಿದ್ದಾರೆ.
ಈಗಾಗಲೇ ಜಿಲ್ಲೆಯನ್ನು ಸೀಲ್ ಡೌನ್ ಮಾಡಲಾಗಿದೆ. ಜಿಲ್ಲೆಯೊಳಕ್ಕೆ ಕೊರೋನಾ ಹರಡುತ್ತಿದ್ದ ಬಗ್ಗೆ ವರದಿಯಾಗುತ್ತಿದ್ದು ಜನರು ಹೆಚ್ಚು ಸೇರುವ ಸ್ಥಳಗಳಲ್ಲಿ ಕೊರೋನಾ ಹಬ್ಬುವ ಸಾಧ್ಯತೆಗಳಿರುವ ಕಾರಣಕ್ಕಾಗಿ ಸಾರ್ವಜನಿಕ ಸಾರಿಗೆಯನ್ನು ಬಂದ್ ಮಾಡಲಾಗುತ್ತದೆ. ಕಳೆದ ಎರಡು ತಿಂಗಳು ಸಾರಿಗೆ ವ್ಯವಸ್ಥೆಗೆ ಅವಕಾಶ ಕಲ್ಪಿಸಿದ್ದಾಗ ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಜನರನ್ನು ಬಸ್ಸಿಗೆ ಹತ್ತಿಸಿಕೊಳ್ಳುವುದು ಗಮನಕ್ಕೆ ಬಂದಿದೆ. ಈ ಬಗ್ಗೆ 25ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಿದರೂ ಕೂಡ ಸಾರ್ವಜನಿಕರಾಗಲಿ, ಬಸ್ ಮಾಲಿಕರಾಗಲಿ, ಡ್ರೈವರ್ ಮತ್ತು ಕಂಡಕ್ಟರ್ ಆಗಲಿ ಸರಕಾರದ ನಿಯಮಾವಳಿಗಳನ್ನು ಪಾಲಿಸಿಲ್ಲ.
ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವುದ್ದು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ 14 ದಿನಗಳ ಕಾಲ ಬಸ್ ಸೇವೆ ಸ್ಥಗಿತಗೊಳಿಸಿ ಜಿಲ್ಲಾಡಳಿತ ಈ ಆದೇಶ ನೀಡಿದೆ. ಜುಲೈ 29 ರ ಬಳಿಕ ಸಂಚಾರ ಸೇವೆ ಆರಂಭಿಸಲಾಗುತ್ತದೆ ಎಂದು ಡಿಸಿ ತಿಳಿಸಿದ್ದಾರೆ.
(ವರದಿ- ಯೋಗೀಶ್ ಕುಂಭಾಸಿ)
Comments are closed.