ಉಡುಪಿ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಶನಿವಾರ ಶತಕ ದಾಟಿದೆ.ಇಂದು ಮತ್ತೆ 109 ಜನರಿಗೆ ಕೋವಿಡ್ 19 ಸೋಂಕು ದೃಢವಾಗಿದ್ದು, ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2088ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 24,382 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. ಅವುಗಳ ಪರೀಕ್ಷೆ ನಡೆಸಿದಾಗ 2088 ಜನರ ಗಂಟಲು ದ್ರವ ಮಾದರಿ ಫಲಿತಾಂಶ ಪಾಸಿಟಿವ್ ಆಗಿದ್ದು, 21,757 ಜನರ ಮಾದರಿ ನೆಗಟಿವ್ ಆಗಿದೆ.
ಜಿಲ್ಲೆಯಲ್ಲಿ ಈವರೆಗೆ 9 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
Comments are closed.