ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾನುವಾರ ಕೊರೋನಾ ಸೋಂಕಿತರ ಸಂಖ್ಯೆ ಶನಿವಾರಕ್ಕಿಂತಲೂ ಹೆಚ್ಚಿದೆ. ಇಂದು ಒಟ್ಟು 134 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2222 ಕ್ಕೆ ಏರಿಕೆಯಾಗಿದೆ.
ಭಾನುವಾರ 455 ಮಂದಿಯ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಗಳಿಗೆ ಕಳುಹಿಸ ಲಾಗಿದೆ. 509 ವರದಿಗಳು ಬರುವುದು ಬಾಕಿ ಇದೆ. ಶೀತಜ್ವರ, ತೀವ್ರ ಉಸಿರಾಟದ ಸಮಸ್ಯೆ (ಐಎಲ್ಐ ಹಾಗೂ ಸಾರಿ ಪ್ರಕರಣ) ಹಾಗೂ ಕೋವಿಡ್ ಲಕ್ಷಣಗಳಿರುವ 27 ಜನರನ್ನು ಐಸೊಲೇಷನ್ ವಾರ್ಡಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲೆಯಲ್ಲಿ ಇದುವರೆಗೂ 1628 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ 11 ಜನ ಸೋಂಕಿತರು ಮೃತಪಟ್ಟಿದ್ದಾರೆ.
ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
Comments are closed.