ಆರೋಗ್ಯ

ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ಶ್ರೀಗಳಿಗೆ ಕೊರೊನಾ ಸೋಂಕು

Pinterest LinkedIn Tumblr

ಉಡುಪಿ: ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೂ ಕೊರೋನಾ ಸೋಂಕು ದೃಢವಾದ ಹಿನ್ನೆಲೆ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸುಗುಣೇಂದ್ರ ಶ್ರೀಗಳಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷಾ ಮಾದರಿ ಸಂಗ್ರಹಿಸಲಾಗಿತ್ತು. ಮಂಗಳವಾರ ಅದರ ವರದಿ ಕೈ ಸೇರಿದ್ದು, ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿದೆ.

ಸ್ವಾಮೀಜಿಗಳು ಇಂದಿನಿಂದ ಪಾಡಿಗಾರು ಮಠದಲ್ಲಿ ಚಾರ್ತುಮಾಸ ವೃತವನ್ನು ಅರಂಭಿಸಬೇಕಾಗಿತ್ತು ಎಂದು ತಿಳಿದುಬಂದಿದೆ.

Comments are closed.