ಆರೋಗ್ಯ

ಮಾಸ್ಕ್ ಧರಿಸದ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದವರಿಂದ ದಂಡ ವಸೂಲಿ..!

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯ ಪ್ರಕರಣಗಳು ತೀವ್ರವಾಗಿ ಹೆಚ್ಚಳವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕೊರೋನಾ ವೈರಾಣು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಹಾಗೂ ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸುವುದು ಕಡ್ಡಾಯವಾಗಿದ್ದು, ಇದರ ಉಲ್ಲಂಘನೆಗಾಗಿ ದಂಡ ವಿಧಿಸಲು ಸರಕಾರದಿಂದ ಆದೇಶವಾಗಿರುತ್ತದೆ.

ಅದರಂತೆ ಜುಲೈ 21 ರಂದು ಸಂಜೆ 5 ಘಂಟೆಯಿಂದ 6 ಘಂಟೆಯವರೆಗೆ ಜಿಲ್ಲೆಯ ಉಡುಪಿ ನಗರ ಸೇರಿದಂತೆ ಎಲ್ಲಾ ಪಟ್ಟಣ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಹಾಗೂ ಸರಕಾರವು ವಿಧಿಸಿರುವ ನಿರ್ದೇಶನಗಳನ್ನು ಸಾರ್ವಜನಿಕರು ಪಾಲಿಸುತ್ತಿರುವರೇ ಎಂಬ ಬಗ್ಗೆ ಜಿಲ್ಲಾಧಿಕಾರಿಯವರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಅಪರ ಜಿಲ್ಲಾಧಿಕಾರಿಯವರು, ಜಿಲ್ಲೆಯ ನಗರ ಆಡಳಿತ ಸಂಸ್ಥೆಗಳ ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳೊಂದಿಗೆ ನಗರ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಹಮ್ಮಿಕೊಳ್ಳಲಾದ ಜನಜಾಗೃತಿ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಹಾಗೂ ಮಾಸ್ಕ್ಗಳನ್ನು ಧರಿಸದೇ ಇರುವ ಸಾರ್ವಜನಿಕರಿಂದ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಒಟ್ಟು 9,300 ಹಾಗೂ ಗ್ರಾಮೀಣ ಪ್ರದೇಶದಲ್ಲಿ ಒಟ್ಟು 28,900 ದಂಡ ವಸೂಲಿಗಳನ್ನು ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.